Slide
Slide
Slide
previous arrow
next arrow

ಮೇವು ಕತ್ತರಿಸುವ ಯಂತ್ರಗಳ ಸದ್ಬಳಕೆಗೆ ದೇಶಪಾಂಡೆ ಕರೆ

300x250 AD

ಹಳಿಯಾಳ : ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ತಾಲೂಕು ಪಂಚಾಯತ್ ಹಾಗೂ ಪಶುಪಾಲನಾ ಸೇವಾ ಇಲಾಖೆ ಹಳಿಯಾಳ ಇವರ ಸಹಯೋಗದಲ್ಲಿ ಪಟ್ಟಣದ ಪಶುವೈದ್ಯ ಆಸ್ಪತ್ರೆಯ ಆವರಣದಲ್ಲಿ ಅರ್ಹ ಫಲಾನುಭವಿಗಳಿಗೆ ಮೇವಿನ ಬೀಜ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಶನಿವಾರ ಶಾಸಕ ಆರ್.ವಿ.ದೇಶಪಾಂಡೆಯವರು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ.ದೇಶಪಾಂಡೆಯವರು ಮೇವಿನ ಬೀಜ ಹಾಗೂ ಮೇವು ಕತ್ತರಿಸುವ ಯಂತ್ರಗಳನ್ನು ಪಡೆದ ಫಲಾನುಭವಿಗಳು ಇದರ ಸದ್ಬಳಕೆಯನ್ನು ಮಾಡಿಕೊಂಡು ಆರ್ಥಿಕವಾಗಿ ಪ್ರಗತಿಯೆಡೆಗೆ ಸಾಗಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಆರ್.ಎಚ್.ಭಾಗವಾನ್, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಪರಶುರಾಮ ಗಸ್ತಿ, ಪಶುವೈದ್ಯ ಇಲಾಖೆಯ ಸಹಾಯಕ‌ ನಿರ್ದೇಶಕರಾದ ಡಾ.ಕೆ.ಎಂ.ನದಾಫ್, ಪುರಸಭೆಯ ನಿಕಟಪೂರ್ವ ಅಧ್ಯಕ್ಷರಾದ ಅಜರ್ ಬಸರೀಕಟ್ಟಿ, ಕೆಪಿಸಿಸಿ ಸದಸ್ಯರಾದ ಸುಭಾಷ್ ಕೊರ್ವೇಕರ, ಮುಖಂಡರುಗಳಾದ ಕೈತನಾ ಬಾರ್ಬೋಜಾ, ರವಿ ತೋರಣಗಟ್ಟಿ, ಎಚ್.ಬಿ.ಪರಶುರಾಮ ಮೊದಲಾದವರು ಉಪಸ್ಥಿತರಿದ್ದರು.

300x250 AD

Share This
300x250 AD
300x250 AD
300x250 AD
Back to top