Slide
Slide
Slide
previous arrow
next arrow

ಅಮರಶಿಲ್ಪಿ ಜಕಣಾಚಾರಿ ವಿಶ್ವ ಶ್ರೇಷ್ಠ ಶಿಲ್ಪಿ: ಪ್ರಕಾಶ್ ರಾಜಪೂತ್

300x250 AD

ಕಾರವಾರ: ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶಿಲ್ಪಕಲೆಗೆ ಹೆಚ್ಚಿನ ಮಹತ್ವವಿದೆ. ಇತಿಹಾಸದ ಪುಟಗಳನ್ನು ತೆರೆದು ನೋಡಿದಾಗ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು ಹಳೆಬೀಡಿನಲ್ಲಿ ಕೆತ್ತಿರುವ ಶಿಲ್ಪಕಲೆಯ ಮೂಲಕ ಇಡೀ ವಿಶ್ವವೇ ವೀಕ್ಷಿಸುವಂತೆ ಮಾಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಕಾರ್ಯಕ್ರಮದಲ್ಲಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಭಾರತೀಯ ಇತಿಹಾಸದಲ್ಲಿ ಕಲೆಗೆ ತನ್ನದೇ ಆದ ಇತಿಹಾಸ ಇದೆ. ಆ ದಿಸೆಯಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು, ಹಳೆಬೀಡು, ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಕೆತ್ತನೆಗಳೆ ಸಾಕ್ಷಿ ಎಂದು ನುಡಿದರು. ಶಿಲ್ಪಕಲೆ ಎನ್ನುವುದು ಅತ್ಯಂತ ನಾಜೂಕಾದ ಕೆತ್ತನೆಯ ಕಲೆ ಇಂತಹ ವಿಶೇವಾದಂತಹ ಕಲೆಯ ಮೂಲಕ ಅಮರಶಿಲ್ಪಿ ಜಕಣಾಚಾರಿ ಅವರು ನಾಡಿನ ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ವಿಶ್ವಕರ್ಮ ಸಮುದಾಯದ ಬೇಡಿಕೆಗಳಿದ್ದಲ್ಲಿ ಗಮನಕ್ಕೆ ತನ್ನಿ, ಅವುಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದ ಅವರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಶಿಕ್ಷಣ ಅತೀ ಮುಖ್ಯ, ಸಮಾಜದ ಬಂಧುಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ಹೇಳಿದರು.

300x250 AD

ಭಾರತೀಯ ವಿಶ್ವಕರ್ಮ ಸೇವಾ ಪರಿಷತ್ನ ರಾಜ್ಯ ಉಪಾಧ್ಯಕ್ಷ ರಾಘವೇಂದ್ರ ಆಚಾರ್ಯ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಅಮರಶಿಲ್ಪಿ ಜಕಣಾಚಾರಿ ಅತ್ಯಂತ ಶ್ರೇಷ್ಠ ಶಿಲ್ಪಿ , ಅವರ ವಿಚಾರಧಾರೆ, ಸಂಸ್ಕೃತಿಯ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿರುವ ಸಂಗತಿ. ಶಿಲ್ಪಕಲೆಗೆ ಮತ್ತೊಂದು ಹೆಸರೇ ಜಕಣಾಚಾರಿ. ಅವರು ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ತಮ್ಮ ವೃತ್ತಿ ಜೀವನದಲ್ಲಿ ನಾಡಿನಲ್ಲಿ ಹಲವು ದೇವಾಲಯಗಳನ್ನು ನಿರ್ಮಿಸಿದ್ದಾರೆ ಎಂದರು. ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಗೋಪಾಲ ಆಚಾರ್ಯ ಮಾತನಾಡಿ ವಿಶ್ವಕರ್ಮ ಸಮಾಜದವರು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಲೆಗಳ ಪ್ರದರ್ಶನಕ್ಕೆ ಅವಕಾಶ ಮಾಡಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಂದು ಸಮುದಾಯ ಭವನ ನಿರ್ಮಾಣ ಮಾಡಬೇಕು. ಮುಂದಿನ ದಿನಗಳಲ್ಲಿ ಜಕಣಾಚಾರಿ ಜಯಂತಿಯನ್ನು ಪ್ರತಿ ತಾಲ್ಲೂಕಿನಲ್ಲೂ ಆಚರಣೆ ಮಾಡಬೇಕು. ಸರ್ಕಾರದಿಂದ ಬಂದಂತಹ ಸೌಲಭ್ಯಗಳನ್ನು ಸಮಾಜದವರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ವಿವಿಧ ವೃತ್ತಿ ಕೌಶಲ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿಶ್ವಕರ್ಮ ಸಮಾಜದ ಮಂಜುನಾಥ ರಾಮಾ ಆಚಾರ್ಯ, ಗಂಗಾಧರ ಮಲ್ಲಯ್ಯ ಆಚಾರ್ಯ, ಗಣಪತಿ ವಿಠಲ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಾಮಚಂದ್ರ ಕೆ. ಎಮ್, ವಿಶ್ವಕರ್ಮ ಸಮಾಜದ ಮುಖಂಡ ಜಗದೀಶ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top