Slide
Slide
Slide
previous arrow
next arrow

ರಾಜ್ಯ ಮಟ್ಟದ ಪುಸ್ತಕ ಆಯ್ಕೆಗೆ ಅರ್ಜಿ ಅಹ್ವಾನ

300x250 AD

ಕಾರವಾರ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2023 ರಲ್ಲಿ ಪ್ರಥಮವಾಗಿ ಮುದ್ರಣಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ ನವಸಕ್ಷಾರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ/ ಆಂಗ್ಲ/ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ- ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿಂದ ಪುಸ್ತಕಗಳನ್ನು ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸ್ವೀಕರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯಲ್ಲಿ (ಅರ್ಜಿ ನಮೂನೆಯು ಇಲಾಖೆಯ ಅಂತರ್ಜಾಲದಲ್ಲಿ http://www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳಲ್ಲಿ ದೊರೆಯುತ್ತವೆ) 2023 ನೇ ವರ್ಷದಲ್ಲಿ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಜ.31 ರೊಳಗಾಗಿ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಫೆಬ್ರವರಿ 5 ರೊಳಗಾಗಿ ಸಲ್ಲಿಸಬೇಕು.

300x250 AD

ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿ, ಕಾಪಿರೈಟ್ನ ನೋಂದಣಿಯ ದೃಢೀಕರಿಸಿದ ನಕಲುಪ್ರತಿ, ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಅರ್ಜಿಯ ಜೊತೆ ಕಡ್ಡಾಯವಾಗಿ ಸಲ್ಲಿಸಬೇಕೆಂದು ಬೆಂಗಳೂರು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This
300x250 AD
300x250 AD
300x250 AD
Back to top