ಶಿರಸಿ: ಕಾರವಾರದ ವಿಜ್ಞಾನ ಉಪಪ್ರಾದೇಶಿಕ ಕೇಂದ್ರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೊಜೆಕ್ಟ್ ಮಂಡನೆಯಲ್ಲಿ ಸರಕಾರಿ ಪ್ರೌಢಶಾಲೆ ಗಣೇಶನಗರದ ವಿದ್ಯಾರ್ಥಿಗಳಾದ ದರ್ಶನ ಬಾಗೇವಾಡಿ ಮತ್ತು ರಕ್ಷಿತಾ ಹೆಗಡೆ ತಂಡ ವಿಜೇತರಾಗಿ ಕೊಪ್ಪಳದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು “ಪರಿಸರ ಮತ್ತು ಆರೋಗ್ಯಕ್ಕಾಗಿ ತಾಂತ್ರಿಕ ನಾವೀನ್ಯತೆ” ಎಂಬ ಉಪವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಇವರಿಗೆ ಶಿಕ್ಷಕ ಕೆ.ಎಲ್.ಭಟ್ಟ ಮಾರ್ಗದರ್ಶನ ನೀಡಿದ್ದಾರೆ. ಅಭಿಷೇಕ ನಾಯ್ಕ ತಾಂತ್ರಿಕ ನೆರವು ನೀಡಿದ್ದಾರೆ. ಈ ಸಾಧನೆಗೆ ಕಾರಣೀಕರ್ತರಾದ ಎಲ್ಲರನ್ನು ಕ್ಷೇತ್ರಶಿಕ್ಷಣಾಧಿಕಾರಿಗಳು ಎನ್.ಸಿ.ನಾಯ್ಕ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರು ಪ್ರಕಾಶ ಆಚಾರಿ ಮತ್ತು ಸದಸ್ಯರು, ಮುಖ್ಯಾಧ್ಯಾಪಕ ಆರ್.ಜಿ.ಪಟಗಾರ ಮತ್ತು ಶಿಕ್ಷಕವೃಂದದವರು ಅಭಿನಂದಿಸಿದ್ದಾರೆ.