ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ಮೇಲೆ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಗಣಪತಿ ಕಟ್ಟೆ ಬಳಿಯಲ್ಲಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಬಿದ್ದಿದೆ.
ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಲಾರಿ ಹೋಗುತ್ತಿರುವಾಗ ಪಲ್ಟಿ ಬಿದ್ದಿದ್ದು,ಲಾರಿಯಲ್ಲಿದ್ದ ಹಿಟ್ಟಿನ ಮೂಟೆಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಚಾಲಕ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.