Slide
Slide
Slide
previous arrow
next arrow

ಕೇರವಾಡದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಹೊಲಿಗೆ ತರಬೇತಿ

300x250 AD

ದಾಂಡೇಲಿ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಆಶ್ರಯದಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಹಯೋಗದಲ್ಲಿ ತಾಲೂಕಿನ ಕೇರವಾಡದಲ್ಲಿ ಆಯೋಜಿಸಲಾಗಿದ್ದ ಒಂದು ತಿಂಗಳ ಉಚಿತ ಹೊಲಿಗೆ ತರಬೇತಿಯು ಮಂಗಳವಾರ ಯಶಸ್ವಿಯಾಗಿ ಸಂಪನ್ನಗೊಂಡಿತು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ವಿಭಾಗದ ಖಲೀಲ್ ಕುಲಕರ್ಣಿ, ಬಗರು ಹುಕುಂ ಸಮಿತಿಯ ಸದಸ್ಯರಾದ ಎಚ್.ಬಿ.ಪರಶುರಾಮ, ಮಾಜಿ ಗ್ರಾ.ಪಂ ಸದಸ್ಯ ರಮೇಶ್ ಶೆಟ್ಟೆಪ್ಪನವರ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಸ್ವ ಉದ್ಯೋಗ ತರಬೇತಿಗಳನ್ನು ನೀಡುವ ಮೂಲಕ ಮಹಿಳೆಯರನ್ನು ಯಶಸ್ವಿ ಸ್ವಾವಲಂಬಿಗಳನ್ನಾಗಿಸುವ ನಿಟ್ಟಿನಲ್ಲಿ ಬಹುಮೂಲ್ಯ ಕೊಡುಗೆಯನ್ನು ನೀಡುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಯೋಜನಾ ಸಂಯೋಜಕ ವಿನಾಯಕ ಚೌವ್ಹಾಣ್ ಅವರು ಸಂಸ್ಥೆಯ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮಗಳಿಗೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ನಿರಂತರ ಸಹಕಾರವನ್ನು ನೀಡುತ್ತಿರುವುದು ಶ್ಲಾಘನೀಯವಾಗಿದೆ. ತರಬೇತಿಯಲ್ಲಿ ಭಾಗವಹಿಸಿರುವ ಶಿಬಿರಾರ್ಥಿಗಳು ತರಬೇತಿಯ ಲಾಭವನ್ನು ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕೆಂದು ಕರೆ ನೀಡಿದರು.

300x250 AD

ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಕ್ಷೇತ್ರ ಮೇಲ್ವಿಚಾರಕರಾದ ಅಂದಾನಪ್ಪ ಅಂಗಡಿ ಅವರು ಸ್ವಾಗತಿಸಿ, ವಂದಿಸಿದರು.

Share This
300x250 AD
300x250 AD
300x250 AD
Back to top