ಕುಮಟಾ: ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ತಾಲೂಕಿನ ಪ್ರಸಿದ್ದ ಪ್ರಮುಖ ಕಡಲತೀರಗಳಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಮೀನುಗಾರಿಕೆಗೆ ಹೊರತುಪಡಿಸಿ ಉಳಿದ ಚಟುವಟಿಕೆಗಳನ್ನು ಅ.9ರ ವರೆಗೆ ಸಂಪೂರ್ಣ ಸ್ಥಗಿತಗೊಳಿಸಬೇಕು ಎಂದು ತಹಸೀಲ್ದಾರ ವಿವೇಕ ಶೇಣ್ವಿ ಆದೇಶಿಸಿದ್ದಾರೆ.
ಅವರು ಈ ಕುರಿತು ಪ್ರಕಟಣೆ ನೀಡಿ, ಕುಮಟಾ ಪೆÇಲೀಸ್ ಠಾಣೆ ವ್ಯಾಪ್ತಿಯ ಬಾಡ, ಗುಡೇಅಂಗಡಿ, ಕಾಗಾಲ, ಅಘನಾಶಿನಿ, ಧಾರೇಶ್ವರ ಹಾಗೂ ಗೋಕರ್ಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಓಂ ಬೀಚ್, ಕುಡ್ಲೆ ಬೀಚ್, ಮೇನ್ ಬೀಚ್ ಮತ್ತು ಹಾಪ್ ಮೂನ್ ಬೀಚ್‍ಗಳು ಆಕರ್ಷಣೀಯ ಪ್ರವಾಸಿ ತಾಣಗಳಾಗಿದ್ದು, ದಿನಂಪ್ರತಿ ಸಾವಿರಾರು ಪ್ರವಾಸಿಗರು ಆಗಮಿಸಿ, ಕಡಲ ಸೌಂದರ್ಯಗಳನ್ನು ಸವಿಯುತ್ತಾರೆ. ಹೀಗೆ ಬಂದವರಲ್ಲಿ ಕೆಲ ಪ್ರವಾಸಿಗರು ಆಕಸ್ಮಿಕವಾಗಿ ಸಮುದ್ರ ಅಲೆಗೆ ಸಿಲುಕಿ ಅಥವಾ ಈಜಲು ಸಮುದ್ರದಲ್ಲಿ ಇಳಿದು ಅಲೆಯ ಸೆಳೆತಕ್ಕೆ ಪ್ರಾಣ ಕಳೆದುಕೊಳ್ಳುತ್ತಿರುವುದು ಪೆÇಲೀಸ್ ಇಲಾಖಾ ವರದಿಯಿಂದ ತಿಳಿದು ಬಂದಿದೆ.
ಗೋಕರ್ಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 2010 ನೇ ಸಾಲಿನಿಂದ ಈವರೆಗೂ ಬೀಚ್‍ಗಳಲ್ಲಿ ಈಜಲು ಹೋಗಿ ಹಾಗೂ ಆಕಸ್ಮಿಕ ಸಮುದ್ರದ ಅಲೆ ಅಪ್ಪಳಿಸಿ ಮುಳಗಿ ಮೃತಪಟ್ಟ ಪ್ರಕರಣಗಳ ಅಂಕಿ-ಅಂಶ ಮಾಹಿತಿಯಂತೆ 2020 ಡಿಸೆಂಬರ್ ವರೆಗೆ ಸುಮಾರು 67 ಮತ್ತು 2021 ಜನೆವರಿಯಿಂದ ಈವರೆಗೆ ಸುಮಾರು 9 ಜನರು ಸಮುದ್ರದಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.