Slide
Slide
Slide
previous arrow
next arrow

ಬರ ನಿರ್ವಹಣೆಯಲ್ಲಿ ಲೋಪವಾದರೆ ಅಧಿಕಾರಿಗಳೇ ಹೊಣೆ :ಸಚಿವ ವೈದ್ಯ ಎಚ್ಚರಿಕೆ

300x250 AD

ಕಾರವಾರ: ಜಿಲ್ಲೆಯಲ್ಲಿ ಬರ ನಿರ್ವಹಣೆ ಕುರಿತಂತೆ ಸಾರ್ವಜನಿಕರಿಗೆ ಕುಡಿಯವ ನೀರಿನ ವ್ಯವಸ್ಥೆ ಮತ್ತು ಜಾನುವಾರುಗಳಿಗೆ ಮೇವಿನ ವ್ಯವಸ್ಥೆಯಲ್ಲಿ ಯಾವುದೇ ಕೊರತೆಯಾದಲ್ಲಿ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರ್ ಗಳನ್ನೇ ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಎಚ್ಚರಿಕೆ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಬರ ನಿರ್ವಹಣೆ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ರಾಜ್ಯ ಸರ್ಕಾರವು ಬರ ನಿರ್ವಹಣೆಗಾಗಿ ಜಿಲ್ಲೆಗೆ 16.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಈ ಮೊತ್ತವನ್ನು ಜಿಲ್ಲಾಧಿಕಾರಿಗಳು ಎಲ್ಲಾ ತಾಲೂಕುಗಳು ತಹಸೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ. ತಹಸೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆ ಮತ್ತು ಮೇವಿನ ಸಮಸ್ಯೆ ಕುರಿತಂತೆ ಪರಿಶೀಲಿಸಿ, ಸಾಕಷ್ಟು ಮುಂಚಿತವಾಗಿಯೇ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಬೇಕು, ತಪ್ಪಿದಲ್ಲಿ ಅಂತಹ ತಹಸೀಲ್ದಾರ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕುಡಿಯುವ ನೀರಿನ ಕೊರತೆಯಾಗದಂತೆ ಜಲಮೂಲಗಳನ್ನು ಗುರುತಿಸಿಟ್ಟುಕೊಂಡು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಮತ್ತು ಖಾಸಗಿ ಬೋರ್ವೆಲ್ ಗಳನ್ನು ಬಾಡಿಗೆ ಪಡೆಯವ ಕುರಿತಂತೆ ಸಿದ್ದತೆಗಳನ್ನು ಕೈಗೊಳ್ಳಿ. ಬರ ನಿರ್ವಹಣೆಗಾಗಿ ಹಣದ ಯಾವುದೇ ಕೊರೆತೆಯಿಲ್ಲ, ಶಾಸಕರ ನಿಧಿಯಲ್ಲೂ ಸಹ 2 ಕೋಟಿ ರೂ.ಅನುದಾನ ಲಭ್ಯವಿದ್ದು ಅದನ್ನೂ ಸಹ ನೀಡಲಾಗುವುದು ಆದರೆ ಯಾವುದೇ ಸಂದರ್ಭದಲ್ಲೂ ಜಿಲ್ಲೆಯ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಮತ್ತು ಸಿದ್ದತೆ ಕೈಗೊಳ್ಳಿ. ಪ್ರತೀ 10 ದಿನಗಳಿಗೊಮ್ಮೆ ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ,ಸಮಸ್ಯೆಗಳ ಪರಿಶೀಲನೆ ಮಾಡಿ, ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ಫ್ರುಟ್ಸ್ ನೋಂದಣಿಯಲ್ಲಿ 100% ಗುರಿ ಸಾಧಿಸುವುದ ಮೂಲಕ ರೈತರಿಗೆ ಬೆಳೆ ಪರಿಹಾರ ಸಪರ್ಮಕವಾಗಿ ದೊರಕುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಕುಡಿಯುವ ನೀರು ಯೋಜನೆಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕ ಬಳಕಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದರು.

300x250 AD

ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಪ್ರಸ್ತುತ ಶೇ. 16 ರಷ್ಟು ಮಳೆ ಕೊರತೆಯಾಗಿದ್ದು, 12 ತಾಲೂಕುಗಳು ಬರ ಪೀಡಿತ ಎಂದು ಈಗಾಗಲೇ ಘೋಷಣೆಯಾಗಿದೆ. ಬರ ನಿರ್ವಹಣೆ ಕುರಿತಂತೆ ಕುಡಿಯುವ ನೀರು, ಜಲಮೂಲಗಳ ಮೇಲ್ವಿಚಾರಣೆ, ಬೆಳೆ ನಿರ್ವಹಣೆ, ಪರಿಹಾರ ನೀಡಿಕೆ, ಮೇವು ನಿರ್ವಹಣೆ, ಉದ್ಯೋಗ ಪರಿಹಾರ, ಆಹಾರ ಭದ್ರತೆ ಕುರಿತಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ತಾಲೂಕು ಮಟ್ಟದಲ್ಲಿ ಟಾಸ್ಕ್ಪೋರ್ಸ್ ಸಭೆಗಳನ್ನು ನಡೆಸಿ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ತಿಳಿಸಿದ್ದು ಬರನಿರ್ವಹಣೆಗೆ ಅನುದಾನವನ್ನು ಕೂಡಾ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ್ ಹಾಗೂ ಎಲ್ಲಾ ತಹಸೀಲ್ದಾರ್ ಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top