ಬೆಂಗಳೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ ಬರಬೇಕಾದ ಬಾಕಿ ಸೇರಿದಂತೆ 959 ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಈ ಮೊತ್ತದಲ್ಲಿ 117 ಕೋಟಿ ರೂ. ಹೆಚ್ಚುವರಿ ಮೊತ್ತವೂ ಸೇರಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿಯ ಬಾಕಿ ಹಣವನ್ನು ಬಿಡುಗಡೆ ಮಾಡಬೇಕಾಗಿತ್ತು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಸಹ ಬರೆಯಲಾಗಿತ್ತು. ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಮಾಡಲಾಗಿತ್ತು ಎಂಬುದಾಗಿಯೂ ಈಶ್ವರಪ್ಪ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯದ ಮನವಿಗೆ ಸ್ಪಂದಿಸಿದೆ. ಬಾಕಿ ಮೊತ್ತ ಪಾವತಿಸಿದೆ. ರಾಜ್ಯಕ್ಕೆ 13 ಕೋಟಿ ಮಾನವ ದಿನಗಳ ಗುರಿ ನೀಡಲಾಗಿತ್ತು. ಇದರಲ್ಲಿ 9 ಕೋಟಿಗಳ ಗುರಿ ಸಾಧಿಸಲಾಗಿದೆ. ನರೇಗಾದಲ್ಲಿ ರಾಜ್ಯ ದೇಶದಲ್ಲೇ ನಂ 1 ಸ್ಥಾನದಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13