Slide
Slide
Slide
previous arrow
next arrow

ರಾಮಭಕ್ತರ ಮೇಲಿನ ಪೋಲಿಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

300x250 AD

ಕಾರವಾರ: 31 ವರ್ಷದ ಹಳೆ ಪ್ರಕರಣವನ್ನು ಕೆದಕಿ ರಾಮಭಕ್ತರ ಮೇಲೆ ನಕಲಿ ಪ್ರಕರಣ ಹಾಕಿರುವ ಕಾಂಗ್ರೆಸ್ ಸರಕಾರದ ವಿರುದ್ಧ ನಗರದ ಸುಭಾಷ್ ವೃತ್ತ ಬಳಿ ಪ್ರತಿಭಟನೆ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ಹುಬ್ಬಳ್ಳಿಯಲ್ಲಿ ಬಂಧನಕ್ಕೊಳಗಾದ ಶ್ರೀಕಾಂತ್ ಪೂಜಾರಿಯವರನ್ನು ಬಿಡುಗಡೆ ಮಾಡಬೇಕು. ರಾಜ್ಯಾದ್ಯಂತ ರಾಮಭಕ್ತರ ಮೇಲೆ ಪೊಲೀಸ್ ಇಲಾಖೆಯಿಂದ ಆಗುತ್ತಿರುವ ದೌರ್ಜನ್ಯವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಹೇಳಿದರು.

ಶಾಸಕ ದಿನಕರ ಶೆಟ್ಟಿ ಮಾತನಾಡಿ, ಇಂದು ರಾಜ್ಯದಲ್ಲಿ ಆಡಳಿತದಲ್ಲಿ ಇರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಕೆಲಸ ಮಾಡುತ್ತಿದೆ. 31 ವರ್ಷದ ಹಿಂದಿನ ಪ್ರಕರಣದಲ್ಲಿ ಅಮಾಯಕರ ಮೇಲೆ ಸುಳ್ಳು ಆರೋಪ ಮಾಡಿ, ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ಹಾಕಿದಕ್ಕೆ ಬಿಜೆಪಿಯಿಂದ ಖಂಡಿಸುತ್ತೇವೆ ಎಂದರು.

300x250 AD

ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ಇಂದು ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸಾಧು ಸಂತರು, ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದು, ರಾಮ ಮಂದಿರಕ್ಕೆ ಹೋರಾಟ ನಡೆಸಿದವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ. ಇದನ್ನು ಹಿಂಪಡೆಯದೇ ಇದ್ದರೆ ಬೃಹತ್ ಪ್ರತಿಭಟನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಕ್ತಾರ ನಾಗರಾಜ ನಾಯಕ, ನಗರ ಅಧ್ಯಕ್ಷ ನಾಗೇಶ್ ಕುರಡೇಕರ್, ಬಿಜೆಪಿ ಮಂಡಲ ಅಧ್ಯಕ್ಷರು, ಜಿಲ್ಲಾ ಪ್ರಮುಖರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಇದ್ದರು.

Share This
300x250 AD
300x250 AD
300x250 AD
Back to top