ಜೋಯಿಡಾ : ತಾಲೂಕು ಪಂಚಾಯತ್ ಸಭಾಭವನದಲ್ಲಿ ಜನವರಿ 8ರಂದು ಮಧ್ಯಾಹ್ನ 2:30 ಗಂಟೆಗೆ ಜೋಯಿಡಾ ತಾಲೂಕು ಪಂಚಾಯತ್ ಸಭಾಭವನದಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ.
ಕೆಡಿಪಿ ಸಭೆಯ ಬಳಿಕ ಸಂಜೆ :4.30 ಗಂಟೆಗೆ ಜೋಯಿಡಾ ತಾಲೂಕಿನ ಬರಪೀಡಿತ ಟಾಸ್ಕ್ ಪೋರ್ಸ್ ಸಮಿತಿ ಸಭೆಯು ನಡೆಯಲಿದೆ. ಅದೇ ದಿನ ಸಂಜೆ 5:30 ಗಂಟೆಗೆ ಪ್ರಧಾನಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಯ ಲೋಕಾರ್ಪಣೆ ಸಮಾರಂಭವು ನಡೆಯಲಿದೆ ಎಂದು ಜೋಯಿಡಾ ತಾಲೂಕು ಪಂಚಾಯತ್ ಕಾರ್ಯಾಲಯವು ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.