ಜೋಯಿಡಾ : ಸುದೀರ್ಘವಾಗಿ ಸೇವೆ ಸಲ್ಲಿಸಿರುವ ತಾಲೂಕಿನ ರಾಮನಗರದ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಂ.ಎಚ್. ನಾಯ್ಕ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಬಿಜಿವಿಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ನಿವೃತ್ತರಾದ ಪ್ರಾಚಾರ್ಯರಾದ ಎಂ.ಎಚ್. ನಾಯ್ಕ ದಂಪತಿಗಳನ್ನು ಬಿಜಿವಿಎಸ್ ಶಿಕ್ಷಣ ಸಂಸ್ಥೆಯ ಪರವಾಗಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಮನಗರ ಗ್ರಾ.ಪಂ ಸದಸ್ಯ ವಿನೋದ ದೇಸಾಯಿ, ಸೂಪಾ ಗ್ರೂಪ್ ಗ್ರಾಮ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಗುರುನಾಥ ಕಾಮತ್, ಬಿ.ಜಿ.ವಿ.ಎಸ್ ಸಂಸ್ಥೆಯ ಪದಾಧಿಕಾರಿಗಳು, ಪ್ರಾಚಾರ್ಯರು, ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ವೃಂದ, ಸಾರ್ವಜನಿಕರು, ವಿದ್ಯಾರ್ಥಿಗಳ ಪಾಲಕರು ಮೊದಲಾದವರು ಉಪಸ್ಥಿತರಿದ್ದರು.