ಶಿರಸಿ: ರಾಜ್ಯ ಭಾರತೀಯ ಜನತಾ ಪಕ್ಷದ ವಕ್ತಾರರಾಗಿ ವಿಸ್ತಾರ ಮೀಡಿಯಾದ ಸಿಇಓ, ಖ್ಯಾತ ಪತ್ರಕರ್ತ ಹರಿಪ್ರಕಾಶ ಕೋಣೆಮನೆಯನ್ನು ನಿಯುಕ್ತಿಗೊಳಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ರಾಜ್ಯ ಬಿಜೆಪಿಯ ಮುಖ್ಯ ವಕ್ತಾರರಾಗಿ ಅಶ್ವತ್ಥನಾರಾಯಣ, ವಕ್ತಾರರಾಗಿ ಹರಿಪ್ರಕಾಶ ಕೋಣೆಮನೆ ಒಳಗೊಂಡು ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಕೆ.ಎಸ್.ನವೀನ ಸೇರಿದಂತೆ 10 ಮಂದಿಯನ್ನು ವಕ್ತಾರರನ್ನಾಗಿ ಘೋಷಿಸಿ ಆದೇಶ ಹೊರಡಿಸಲಾಗಿದೆ. ಹರಿಪ್ರಕಾಶ ಕೋಣೆಮನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನವರಾಗಿದ್ದು, ಲೋಕಸಭೆಗೆ ಅವರ ಹೆಸರು ಕೇಳಿಬಂದಿತ್ತು. ಇದೀಗ ರಾಜ್ಯ ಬಿಜೆಪಿಯ ಜವಾಬ್ದಾರಿ ನೀಡಿರುವ ಮೂಲಕ ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿ ಮಹತ್ವದ ಸಂದೇಶವನ್ನು ಬಿಜೆಪಿ ಹೈಕಮಾಂಡ್ ರವಾನಿಸಿದೆಯಾ ಎಂಬ ಕುತೂಹಲ ಮೂಡಿದೆ. ರಾಷ್ಟ್ರೀಯ ವಿಚಾರಗಳ ಪ್ರಬಲ ಪ್ರತಿಪಾದಕರಾಗಿರುವ ಕೋಣೆಮನೆ ಆರ್ಎಸ್ಎಸ್ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.