ದಾಂಡೇಲಿ : ಸಂಸ್ಕಾರ ಸಾಕಾರ ಭಾರತಿ, ಶ್ರೀ.ಶಂಕರ ಮಠ ಹಾಗೂ ಸಹ್ಯಾದ್ರಿ ಲಲಿತ ಕಲಾ ಕೇಂದ್ರ (ರಿ.) ದಾಂಡೇಲಿ ಇವರ ಸಹಯೋಗದಲ್ಲಿ ನಗರದ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಜನವರಿ 06 ರಂದು ಸಂಜೆ 5:30 ಗಂಟೆಗೆ ನಾಟ್ಯೋತ್ಸವ -2024 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ನೃತ್ಯ ಗುರು ಕೃಷ್ಣ ಭಾಗ್ವತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ನಗರದ ಶ್ರೀ ಶಂಕರ ಮಠದ ಅಧ್ಯಕ್ಷರು ಹಾಗೂ ವಕೀಲರ ಸಂಘದ ಅಧ್ಯಕ್ಷರಾದ ಎಚ್.ಎಸ್.ಕುಲಕರ್ಣಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ.ಎನ್.ವಾಸರೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿಕ್ಷಕರಾದ ಗಣಪತಿ ಶೇಠ್ ಮತ್ತು ಸುಭಾಷ್.ಸಿ.ನಾಯಕ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ನಾಟ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಕಲಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೃಷ್ಣ ಭಾಗ್ವತ್ ಅವರು ವಿನಂತಿಸಿದ್ದಾರೆ.