Slide
Slide
Slide
previous arrow
next arrow

ಜ.6ಕ್ಕೆ ಕುಂಬಾರವಾಡದಲ್ಲಿ ಶ್ರೀಅಯ್ಯಪ್ಪ ಸ್ವಾಮಿ ಪೂಜೋತ್ಸವ

300x250 AD

ಜೋಯಿಡಾ : ಶ್ರೀಅಯ್ಯಪ್ಪ ಸೇವಾ ಸಮಿತಿ ಮತ್ತು ಸ್ಥಳೀಯ ಭಕ್ತಾಭಿಮಾನಿಗಳ ಸಹಕಾರದಲ್ಲಿ ಜ:06ರಂದು ತಾಲೂಕಿನ‌ ಕುಂಬಾರವಾಡದಲ್ಲಿ ಶ್ರೀಅಯ್ಯಪ್ಪ ಸ್ವಾಮಿಯ ಪೂಜೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀ.ಅಯ್ಯಪ್ಪ ಸ್ವಾಮಿಯ ಜ್ಯೋತಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12.30 ಗಂಟೆಗೆ ಶ್ರೀ.ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಮತ್ತು ಶ್ರೀ.ಅಯ್ಯಪ್ಪ ಸ್ವಾಮಿಯ .ಜ್ಯೋತಿ ಪೂಜೆ ನೆರವೇರಲಿದೆ. ಮಹಾಪೂಜೆಯ ಬಳಿಕ ಸಾರ್ವಜನಿಕ ಅನ್ನಸಂಪರ್ಪಣೆ ನಡೆಯಲಿದೆ. ಈ ಎಲ್ಲ ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿ ಶ್ರೀಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದದವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top