Slide
Slide
Slide
previous arrow
next arrow

ದುಶ್ಚಟ ತೊರೆದರೆ ಜೀವನದಲ್ಲಿ ಹೊಸಬೆಳಕು ಮೂಡಲು ಸಾಧ್ಯ: ನಾರಾಯಣ ಭಟ್ ಧರೆ

300x250 AD

ಸಿದ್ದಾಪುರ: ತಾಲೂಕಿನ ಹೆಗ್ಗರಣಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅನ್ನಪೂರ್ಣ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ,ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ಜನಜಾಗೃತಿ ವೇದಿಕೆ,ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹೇರೂರು ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ 1782ನೇ ಮದ್ಯವರ್ಜನ ಶಿಬಿರ ಚಾಲನೆಗೊಂಡಿದೆ.

ಕಾರ್ಯಕ್ರಮವನ್ನು ಉದ್ಘಾಟಿಸಿದ ಹೆಗ್ಗರಣಿ ಶಿಕ್ಷಣ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಭಟ್ಟ ಧರೆ ಮಾತನಾಡಿ, ದುಶ್ಚಟಗಳನ್ನು ತೊರೆದರೆ ಜೀವನದಲ್ಲಿ ಹೊಸಬೆಳಕು ಮೂಡುತ್ತದೆ. ದುಶ್ಚಟಗಳು ಸಂಪೂರ್ಣ ಕುಟುಂಬವನ್ನು ನಾಶಪಡಿಸುತ್ತದೆ. ಸಮಾಜದಲ್ಲಿ ಎಲ್ಲರಂತೆ ಉತ್ತಮ ವ್ಯಕ್ತಿ ಆಗಬೇಕಾದರೆ ಮದ್ಯಪಾನ ಮುಕ್ತ ಜೀವನ ನಡೆಸಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿಯು, ಮದ್ಯವರ್ಜನ ಶಿಬಿರ ನಡೆಸುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಮುಂದಾಗುತ್ತಿರುವುದು ಮಾದರಿಯ ಕಾರ್ಯಕ್ರಮ ಎಂದು ಹೇಳಿದರು.

ಸಮಾಜದಲ್ಲಿ ಎಲ್ಲರಂತೆ ಗೌರವದಿಂದ ಬದುಕನ್ನು ಕಟ್ಟಿಕೊಳ್ಳಬೇಕಾದರೆ ಮದ್ಯವರ್ಜನ ಶಿಬಿರಗಳು ಹೆಚ್ಚು ಪೂರಕವಾಗಿದ್ದು, ಇಂತಹ ಶಿಬಿರಗಳು ಸದಾಕಾಲ ಸ್ಮರಿಸುವಂತಹುದಾಗಿದೆ. ಸರ್ಕಾರದಿಂದ ಮಾಡಲಾಗದಂತಹ ಕೆಲಸಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉತ್ತಮವಾಗಿ ಕಾರ್ಯನಿರ್ವಹಿ ಮಾದರಿಯಾಗುತ್ತಿದೆ ಎಂದು ಹೆಗ್ಗರಣಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಎಲ್.ಭಟ್ಟ ಉಂಚಳ್ಳಿ ಹೇಳಿದರು.

300x250 AD

ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ ರಾಮ ಗೌಡ ಅಧ್ಯಕ್ಷತೆವಹಿಸಿದ್ದರು.ಹೆಗ್ಗರಣಿ ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣ ಚನ್ನಯ್ಯ, ತಂಡಾಗುಂಡಿ ಗ್ರಾಪಂ ಅಧ್ಯಕ್ಷೆ ಪದ್ಮಾವತಿ ಎಂ.ಗೌಡ, ನಿಲ್ಕುಂದ ಗ್ರಾಪಂ ಅಧ್ಯಕ್ಷ ರಾಜಾರಾಮ ಆರ್.ಹೆಗಡೆ, ಜನವಿಕಾಸ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರವೀಂದ್ರ ಹಾಸ್ಯಗಾರ, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷೆ ಗೌರಿ ನಾಯ್ಕ, ಸದಸ್ಯರಾದ ವಿವೇಕಾನಂದ ರಾಯ್ಕರ್, ಲಕ್ಷ್ಮಿರಾಜ, ರಮೇಶ ಹೆಗಡೆ ಹಾರ್ಸಿಮನೆ, ಸುಭಾಸ ನಾಯ್ಕ ಕಾನಸೂರು, ಯೋಗ ಶಿಕ್ಷಕ ಗಣಪತಿ ಹೆಗಡೆ, ಚಂದ್ರಶೇಖರ ಗೌಡ ಇತರರಿದ್ದರು.

ತಾಲೂಕು ಯೋಜನಾಧಿಕಾರಿ ಪ್ರಭಾಕರ ನಾಯ್ಕ ಸ್ವಾಗತಿಸಿದರು. ಶಿಬಿರಾಧಿಕಾರಿ ನಾಗೇಂದ್ರ ಪ್ರಾಸ್ತಾವಿಕ ಮಾತನಾಡಿದರು. ಕೃಷಿ ಮೇಲ್ವಿಚಾರಕ ಮಹಾದೇವ ಬಿ ಕಾರ್ಯಕ್ರಮ ನಿರ್ವಹಿಸಿದರು.ಹೇರೂರು ವಲಯ ಮೇಲ್ವಿಚಾರಕಿ ರೇಖಾ ನಾಯ್ಕ ಹಾಗೂ ಸೇವಾ ಪ್ರತಿನಿಧಿಗಳು ಸಹಕರಿಸಿದರು.

Share This
300x250 AD
300x250 AD
300x250 AD
Back to top