ಶಿರಸಿ : ವಿವೇಕ ಶಾಲಾ ಯೋಜನೆ ಅಡಿಯಲ್ಲಿ ಮಂಜೂರಾದ ನಗರದ ಕೆ.ಎಚ್.ಬಿ. ಕಾಲೋನಿಯ ನೂತನ ಕೊಠಡಿಯ ಉದ್ಘಾಟನಾ ಕಾರ್ಯಕ್ರಮವನ್ನು ಜ.6 ರಂದು ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಅಂದಾಜು 13.90ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಕೊಠಡಿಯ ಉದ್ಘಾಟನೆಯನ್ನು ಶಾಸಕ ಭೀಮಣ್ಣ ನಾಯ್ಕ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಅನಂತಕುಮಾರ ಹೆಗಡೆ ಹಾಗೂ ಇತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಆಗಮಿಸಲು ಸಂಘಟಕರು ವಿನಂತಿಸಿದ್ದಾರೆ.