Slide
Slide
Slide
previous arrow
next arrow

ಪಿ.ಎಂ.ವಿಶ್ವಕರ್ಮ ತರಬೇತಿಯನ್ನು ತಕ್ಷಣ ಆರಂಭಿಸಿ : ಅತುಲ್ ಕುಮಾರ್ ತಿವಾರಿ

300x250 AD

ಕಾರವಾರ: ರಾಜ್ಯದಲ್ಲಿ ಪಿ.ಎಂ. ವಿಶ್ವಕರ್ಮ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ತಕ್ಷಣದಲ್ಲಿ ತರಬೇತಿ ಆರಂಭಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರದ ಕೌಶಲ್ಯಾಭಿವೃಧ್ದಿ ಇಲಾಖೆಯ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ ಸೂಚನೆ ನೀಡಿದರು.

ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಡಿಯೋ ಸಂವಾದದ ಮೂಲಕ, ರಾಜ್ಯದ ಕೌಶಲ್ಯ ಅಭಿವೃದ್ದಿ ನಿಗಮದ ಅಧಿಕಾರಿಗಳು ಮತ್ತು ವಿವಿಧ ಜಿಲ್ಲೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರ್ನಾಟಕದಲ್ಲಿ ಇದುವರೆಗೆ ಪಿ.ಎಂ. ವಿಶ್ವಕರ್ಮ ಯೋಜನೆಯಡಿ 16,64,256 ಮಂದಿ ನೋಂದಣಿ ಮಾಡಿದ್ದು, ಅರ್ಹ ಎಲ್ಲಾ ಅಭ್ಯರ್ಥಿಗಳಿಗೆ ಅವರ ಕ್ಷೇತ್ರದಲ್ಲಿ ಹೆಚ್ಚಿನ ನೈಪುಣ್ಯತೆ ಪಡೆಯಲು ತರಬೇತಿ ನೀಡಲು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ತರಬೇತಿ ಕೇಂದ್ರಗಳಲ್ಲಿ ವಸತಿಯುತ ತರಬೇತಿ ನೀಡಲು ಕ್ರಮ ಕೈಗೊಂಡು, ಮೊದಲ ಆದ್ಯತೆಯಲ್ಲಿ ಸರ್ಕಾರಿ ಕೇಂದ್ರಗಳನ್ನು ತರಬೇತಿ ಕೇಂದ್ರಗಳನ್ನಾಗಿ ಗುರುತಿಸಿ ನಂತರದಲ್ಲಿ ಖಾಸಗಿ ಕೇಂದ್ರದಲ್ಲಿ ಕೂಡಾ ತರಬೇತಿ ನೀಡಲು ವ್ಯವಸ್ಥೆ ಮಾಡಿ. ಮಹಿಳಾ ಅಭ್ಯರ್ಥಿಗಳಿಗೆ ಸಾಧ್ಯವಾದಷ್ಟು ಅವರ ವಾಸಸ್ಥಳಕ್ಕೆ ಹತ್ತಿರದ ಪ್ರದೇಶದಲ್ಲಿ ತರಬೇತಿ ಕೇಂದ್ರ ಗುರುತಿಸಿ. ಜಿಲ್ಲಾ ಮಟ್ಟದಲ್ಲಿ ತರಬೇತಿ ಕೇಂದ್ರಗಳನ್ನು ತೆರೆಯಲು ಕೊರತೆಯಾದಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲೂ ತರಬೇತಿ ಕೇಂದ್ರ ತೆರದು, ತರಬೇತಿ ನೀಡಲು ಕ್ರಮ ಕೈಗೊಳ್ಳಿ ಎಂದರು. ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕುಶಲಕರ್ಮಿಗಳನ್ನು ನೋಂದಣಿ ಮಾಡಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಯೋಜನೆಯ ಪ್ರಯೋಜನವನ್ನು ಕುಶಲಕರ್ಮಿ ಸಮುದಾಯಕ್ಕೆ ಒದಗಿಸಬೇಕು. ಕುಶಲಕರ್ಮಿಗಳಿಗೆ ಟೂಲ್ ಕಿಟ್ ವಿತರಣೆ, ಅವರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಮತ್ತು ಬ್ರಾಡಿಂಗ್ ವ್ಯವಸ್ಥೆಯನ್ನೂ ಕೂಡಾ ಸರ್ಕಾರದಿಂದ ಮಾಡಲಾಗುವುದು ಎಂದರು.

300x250 AD

ಯೋಜನೆಯ ಅನುಷ್ಠಾನ ಕುರಿತಂತೆ ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಕೇಂದ್ರದಿಂದ ತಕ್ಷಣ ಸರಿಪಡಿಸಲಾಗುವುದು, ಎಲ್ಲಾ ಜಿಲ್ಲೆಗಳ ಸಮಸ್ಯೆಗಳನ್ನು ಪ್ರತ್ಯೇಕವಾಗಿಯು ಸರಿಪಡಿಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದ ಅವರು, ಪಿಎಂ ವಿಶ್ವಕರ್ಮ ಯೋಜನೆಯನ್ನು ಕರ್ನಾಟಕ ರಾಜ್ಯದಲ್ಲಿ ಇಡೀ ದೇಶಕ್ಕೆ ಮಾದರಿಯಾಗಿ ಅನುಷ್ಠಾನ ಗೊಳಿಸುವಂತೆ ತಿಳಿಸಿದರು.
ಸಭೆಯಲ್ಲಿ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಕೇಂದ್ರ ಕೌಶಲ್ಯ ಅಭಿವೃದ್ದಿ ಇಲಾಖೆಯ ಜಂಟಿ ಕಾರ್ಯದರ್ಶಿ ಸೋನಲ್ ಮಿಶ್ರ, ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ದಿ ನಿಗಮದ ವ್ಯವಸ್ಥಾಪಕಿ ಕನಗವಲ್ಲಿ, ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹಾಗೂ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top