ಜೋಯಿಡಾ: ತಾಲ್ಲೂಕಿನ ಶ್ರೀಕ್ಷೇತ್ರ ಉಳವಿಯಲ್ಲಿ ಫೆ.16 ರಿಂದ ಫೆ:26 ರವರೆಗೆ ನಡೆಯಲಿರುವ ಇತಿಹಾಸ ಪ್ರಸಿದ್ಧ ಶ್ರೀ ಉಳವಿ ಚನ್ನಬಸವೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತಂತೆ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಜ:10 ರಂದು ಬೆಳಿಗ್ಗೆ 10.30 ಗಂಟೆಗೆ ಶ್ರೀಕ್ಷೇತ್ರ ಉಳವಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಶ್ರೀಕ್ಷೇತ್ರ ಉಳವಿ ಚನ್ನಬಸವೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಈ ಪೂರ್ವಭಾವಿ ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನದ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಶ್ರೀಚನ್ನಬಸವೇಶ್ವರ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.