Slide
Slide
Slide
previous arrow
next arrow

ಸರ್ಕಾರಿ ಶಾಲೆ-ಕಾಲೇಜುಗಳ ಸೇವೆ ಶ್ಲಾಘನೀಯ: ಶಾಸಕ ಭೀಮಣ್ಣ

300x250 AD

ಶಿರಸಿ: ಗ್ರಾಮೀಣ ಪಿಯು ಕಾಲೇಜ್’ಗಳು ಹಿಂದುಳಿದ ವರ್ಗದ ಮತ್ತು ಬಡವರ ಮಕ್ಕಳನ್ನೇ ಅಧಿಕ ಪ್ರಮಾಣದಲ್ಲಿ ಪ್ರವೇಶ ನೀಡಿ ಅವರ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಕಾಲೇಜ್’ಗಳ ಈ ಸಾಧನೆ ಪ್ರಶಂಸನೀಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ತಾಲೂಕಿನ ಕೊಳಗಿಬೀಸ್‌ನ ಮಹಾಬಲೇಶ್ವರ ಹೆಗಡೆ ನೇರ್ಲಹದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು
ಶನಿವಾರ ಉದ್ಘಾಟಿಸಿ ಅವರು ಮಾತನಾಡಿ, ಕೊಳಗಿಬೀಸ್ ಕಾಲೇಜ್ ಇಂದು ಸಿಇಟಿಯಂತಹ ಪರೀಕ್ಷೆಗಳಿಗೂ ತರಬೇತಿ ನೀಡುತ್ತಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಸಂತಸ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ ಮಾತನಾಡಿ, ಇಂದು ಉನ್ನತ ಅಧ್ಯಯನಕ್ಕೆ ಹೆಚ್ಚಿನ ಅವಕಾಶಗಳು ಇವೆ, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕರ್ನಾಟಕ ಗ್ರಾಹಕರ ಸಹಕಾರ ಮಹಾಮಂಡಳಿ ನಿರ್ದೇಶಕರಾದ ಶ್ರೀಪಾದ ಹೆಗಡೆ ಕಡವೆ, ಕೇವಲ ಅಂಕಗಳಿಕೆಗೆ ಮಾತ್ರ ಸೀಮಿತರಾಗದೇ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಮಹತ್ವ ಕೊಡಬೇಕು ಎಂದರು. ಕಾಲೇಜಿನ ಉಪಾಧ್ಯಕ್ಷರಾದ ನರಸಿಂಹ ಹೆಗಡೆ, ಹೆಬ್ಬಲಸು ಇವರು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕೆಂದರು.

300x250 AD

ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ರಾಮಚಂದ್ರ ನಾಯ್ಕ, ವೆಂಕಟ್ರಮಣ ನಾಯ್ಕ, ತಾರಾ ನಾಯ್ಕ, ಅರುಣ ಗೌಡ, ಚಂದ್ರು ಮಡಿವಾಳ, ವಿನಯ ಹೆಗಡೆ, ಸುಬ್ರಹ್ಮಣ್ಯ ಹೆಗಡೆ ಮತ್ತು ನರಸಿಂಹ ದೀಕ್ಷಿತ ಉಪಸ್ಥಿತರಿದ್ದರು. ಪ್ರಾಚಾರ್ಯ ಆದರ್ಶ ಎಂ.ಆರ್‌. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೂರ್ಯನಾರಾಯಣ ಹೆಗಡೆ ಸ್ವಾಗತಿಸಿದರು. ಜ್ಯೋತಿ ಶೇಣೈ ವರದಿ ವಾಚನ ಮಾಡಿದರು. ಹನುಮಂತಪ್ಪ ಒಕ್ಕಳಬೇರಿ ವಂದಿಸಿದರು. ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನೆ ಕಾರ್ಯಕ್ರಮ ನಡೆಯಿತು.

Share This
300x250 AD
300x250 AD
300x250 AD
Back to top