Slide
Slide
Slide
previous arrow
next arrow

ಗೇರುಸೊಪ್ಪ ಸರಕಾರಿ ಪ್ರೌಢಶಾಲೆ ಬೆಳ್ಳಿಹಬ್ಬ ಯಶಸ್ವಿ

300x250 AD

ಹೊನ್ನಾವರ : ಒಳ್ಳೆಯ ಕೆಲಸ ಮಾಡಿದರೆ ಕೆಲಸ ನಮ್ಮನ್ನು ನೆನಪಿಸುತ್ತದೆ. ಅವಕಾಶ ಸಿಕ್ಕಿದಾಗ ಒಳ್ಳೆಯ ಕೆಲಸ ಮಾಡಬೇಕು. ಶಾಲೆ ನಿಜವಾದ ದೇವಸ್ಥಾನ. ಶಿಕ್ಷಣಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಅವರು ತಾಲೂಕಿನ ಗೇರುಸೊಪ್ಪದಲ್ಲಿ ನಡೆದ ಸರಕಾರಿ ಪ್ರೌಢಶಾಲೆಯ ಬೆಳ್ಳಿಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು‌. ಶಿಕ್ಷಣದ ಜೊತೆಗೆ ಒಳ್ಳೆಯ ಸಂಸ್ಕಾರ ಕಲಿಸಬೇಕು‌, ಶಿಕ್ಷಣವಂತರು ತಪ್ಪು ಮಾಡಿದರೆ ಶಿಕ್ಷಣದ ಮೌಲ್ಯ ಕಡಿಮೆಯಾಗುತ್ತದೆ. ಶಿಕ್ಷಣದ ಜೊತೆಗೆ ಮನುಷ್ಯತ್ವ ಇರಬೇಕು. ಇಲ್ಲದಿದ್ದರೆ ಮನುಷ್ಯನಾಗಿ ಇರಲು ಸಾಧ್ಯವಿಲ್ಲ ಎಂದರು.

ಮಾಜಿ ಸಚಿವ ಶಿವಾನಂದ ನಾಯ್ಕ ಅವಧಿಯಲ್ಲಿ ಹನ್ನೆರಡಕ್ಕೂ ಹೆಚ್ಚು ಪ್ರೌಢ ಶಾಲೆಗಳು ತಾಲೂಕಿನಲ್ಲಿ ಆರಂಭವಾಗಿವೆ ಎಂದು ಸ್ಮರಿಸಿದರು.

ಶಾಸಕ ಭೀಮಣ್ಣ ನಾಯ್ಕ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ ಕೇಂದ್ರ, ರಾಜ್ಯ ಸರಕಾರಗಳು, ಮಠಮಾನ್ಯಗಳು, ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಆದ್ಯತೆ ನೀಡಿ ಕೆಲಸ ಮಾಡುತ್ತಿದ್ದರೂ ದೇಶದಲ್ಲಿ ಶೇಕಡಾ 77 ರಷ್ಟು ಜನ ಮಾತ್ರ ಶಿಕ್ಷಣ ಪಡೆದಿದ್ದಾರೆ. ಮಹಾತ್ಮಾ ಗಾಂಧೀಜಿಯವರು ಕಂಡ ರಾಮರಾಜ್ಯದ ಕನಸು ನನಸಾಗಬೇಕಾದರೆ ಎಲ್ಲರೂ ಶಿಕ್ಷಣವಂತರಾಗಬೇಕು ಎಂದರು.

ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ ಬೆಳ್ಳಿಹಬ್ಬದ ಆಚರಣೆಯ ಈ ಸಂದರ್ಭದಲ್ಲಿ ಐದು ಕೊಠಡಿಗಳು ಶಿಥಿಲವಾಗಿದ್ದವು. ಅವುಗಳ ದುರಸ್ತಿಗೆ ಸಚಿವ ಮಂಕಾಳು ವೈದ್ಯ ಅನುದಾನ ಒದಗಿಸುವುದಾಗಿ ಹೇಳಿದ್ದಾರೆ. ಎರಡು ಕೊಠಡಿಗಳ ನಿರ್ಮಾಣಕ್ಕೆ ಈ ಸಂದರ್ಭದಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಅತ್ಯಂತ ಹಿಂದುಳಿದ ಪ್ರದೇಶವಾದ ನಗರಬಸ್ತಿಕೇರಿಯಲ್ಲಿ 25 ವರ್ಷಗಳ ಹಿಂದೆ ಆರಂಭವಾದ ಸರಕಾರಿ ಪ್ರೌಢಶಾಲೆ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದೆ ಎಂದರು.

300x250 AD

ಬೆಳ್ಳಿಹಬ್ಬದ ಅಂಗವಾಗಿ ಬೆಳ್ಳಿ ಬೆಡಗು ಸ್ಮರಣ ಸಂಚಿಕೆಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಸನ್ಮಾನ : ಸಚಿವ ಮಂಕಾಳು ವೈದ್ಯ, ಶಾಸಕ ಭೀಮಣ್ಣ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ಸ್ಥಾಪನೆಗೆ ಕಾರಣರಾದವರನ್ನು, ಶಾಲೆಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ, ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು, ಬೆಳ್ಳಿಹಬ್ಬ ಸಮಿತಿಯವರನ್ನು, ಶಾಲೆಯಲ್ಲಿ ಪಠ್ಯ, ಪಠ್ಯೇತರ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ಬಿಇಒ ಜಿ.ಎಸ್.ನಾಯ್ಕ, ಕುಮಟಾ ಕಾಲೇಜಿನ ಪ್ರಾಧ್ಯಾಪಕ ಆನಂದ ನಾಯ್ಕ ಮತ್ತಿತರರು ಮಾತನಾಡಿದರು. ಮುಖ್ಯಾಧ್ಯಾಪಕಿ ಅನ್ನಪೂರ್ಣ ನಾಯ್ಕ ಸ್ವಾಗತಿಸಿದರು. ಶಿಕ್ಷಕ ಸುಧೀಶ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ವಸಂತ ಶೇಟ್ ವರದಿವಾಚಿಸಿದರು.

ವೇದಿಕೆಯಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಆರ್.ಎಸ್.ರಾಯ್ಕರ, ರಜತ ಮಹೋತ್ಸವ ಸಮಿತಿಯ ಕೋಶಾಧ್ಯಕ್ಷ ಮಂಜುನಾಥ ನಾಯ್ಕ, ಪಿ.ಸಿ.ಎ.ಆರ್.ಡಿ. ಬ್ಯಾಂಕ್ ಅಧ್ಯಕ್ಷ ವಿ.ಎನ್.ಭಟ್, ನಗರಬಸ್ತಿಕೇರಿ ಗ್ರಾ.ಪಂ. ಅಧ್ಯಕ್ಷೆ ಸುನೀತಾ ಹೆಗಡೆ, ಜಿ.ಪಂ. ಮಾಜಿ ಸದಸ್ಯೆ ಪುಷ್ಪಾ ನಾಯ್ಕ, ಮಹಿಮೆ ಗ್ರಾ.ಪಂ. ಅಧ್ಯಕ್ಷ ಗಣೇಶ ನಾಯ್ಕ, ಕುದ್ರಿಗಿ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಫೈಸಲ್ ಭಾವಾಪಕ್ಕಿ, ಗ್ರಾ.ಪಂ ಸದಸ್ಯ ಮಹೇಶ ನಾಯ್ಕ, ತಾ.ಪಂ. ಇಓ ಸುರೇಶ ನಾಯ್ಕ, ಮತ್ತಿತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top