Slide
Slide
Slide
previous arrow
next arrow

ಜ.9ಕ್ಕೆ ಮೂರು ಶಾಲೆಗಳ ನೂತನ ಕೊಠಡಿ ಉದ್ಘಾಟನೆ

300x250 AD

ದಾಂಡೇಲಿ : ದಾಂಡೇಲಿ ನಗರದ ಆಜಾದ್ ನಗರ, ಗಾಂಧಿನಗರ ಮತ್ತು ಬಂಗೂರುನಗರದ ಶಾಲೆಯಲ್ಲಿ ವಿವೇಕ ಯೋಜನೆಯಡಿ ನೂತನವಾಗಿ ನಿರ್ಮಾಣ ಮಾಡಲಾದ ಕೊಠಡಿಗಳ ವಿದ್ಯುಕ್ತ ಉದ್ಘಾಟನಾ ಸಮಾರಂಭವು ಜನವರಿ 9ರಂದು ಶಾಸಕ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಭಾನುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ ಆಯಾಯ ಶಾಲೆಗಳಿಗೆ ಭೇಟಿ ನೀಡಿ, ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಅಗತ್ಯ ಮಾಹಿತಿ ಮಾರ್ಗದರ್ಶನವನ್ನು ನೀಡಿದರು

ಅಂದು ಮಧ್ಯಾಹ್ನ 2.30 ಗಂಟೆಗೆ ಆಜಾದ್ ನಗರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ನೂತನ ಕೊಠಡಿಯ ಉದ್ಘಾಟನೆ, ಮಧ್ಯಾಹ್ನ 3 ಗಂಟೆಗೆ ಗಾಂಧಿನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ, ಮಧ್ಯಾಹ್ನ 3.30 ಗಂಟೆಗೆ ಬಂಗೂರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

300x250 AD

ಕ್ಷೇತ್ರ ಶಿಕ್ಷಣಾಧಿಕಾರಿ ಬೇಟಿಯ ವೇಳೆ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಪ್ರಕಾಶ್ ಶೆಟ್ಟಿ, ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ನಾಯಕ, ಸಿ.ಆರ್.ಪಿಗಳಾದ ಲಲಿತಾ ಗೌಡ, ಶ್ರೀದೇವಿ ಮತ್ತು ಆಯಾಯ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು

Share This
300x250 AD
300x250 AD
300x250 AD
Back to top