ಜೋಯಿಡಾ: ದೇಶದ ಜನಸಾಮಾನ್ಯರಿಗೆ ಉಚಿತ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಸದುದ್ದೇಶದಿಂದ ಅನುಷ್ಠಾನಗೊಳಿಸಲಾದ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆಯಡಿ ಆಯುಷ್ಮಾನ್ ಕಾರ್ಡ್ ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುತ್ತಿದೆ.
ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆಯ ಅಡಿಯಲ್ಲಿ ನೋಂದಾಯಿತ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿಯೂ ಬಿಪಿಎಲ್ ಕಾರ್ಡ್ ದಾರರಿಗೆ 5 ಲಕ್ಷ ರೂಪಾಯಿ ಮೌಲ್ಯದ ಉಚಿತ ಚಿಕಿತ್ಸೆ ಸಿಗುತ್ತದೆ. ಎಪಿಎಲ್ ಕಾರ್ಡ್ ದಾರರಿಗೆ 1.5 ರೂಪಾಯಿ ಚಿಕಿತ್ಸಾ ವೆಚ್ಚ ಲಭ್ಯ. ಆಸ್ಪತ್ರೆಗೆ ದಾಖಲಾದ ಸಮಯದಲ್ಲಿ ಚಿಕಿತ್ಸೆಯ ಜೊತೆಗೆ ಉಚಿತ ವಸತಿ ಮತ್ತು ಆಹಾರದ ಸೌಲಭ್ಯವೂ ಸಿಗಲಿದೆ. 5ಲಕ್ಷ ರೂಪಾಯಿ ಮೌಲ್ಯದ ಉಚಿತ ಚಿಕಿತ್ಸಾ ವೆಚ್ಚಕ್ಕೆ ಸಹಕಾರಿಯಾಗಿರುವ ಆಯುಷ್ಮಾನ್ ಕಾರ್ಡ್ ನ್ನು ಅರ್ಹರಿರುವವರು ಆನ್ ಲೈನ್ ಅರ್ಜಿ ಹಾಕಿ ಯೋಜನೆಯ ಲಾಭ ಪಡೆಯಬೇಕೆಂದು ನಂದಿಗದ್ದೆ ಗ್ರಾಮ ಪಂಚಾಯತ್ ಸದಸ್ಯ ಧವಳೋ ಸಾವರ್ಕರ್ ವಿನಂತಿಸಿದ್ದಾರೆ.