Slide
Slide
Slide
previous arrow
next arrow

ಸಹಕಾರಿ ಕ್ಷೇತ್ರದಲ್ಲಿ ರಾಜಕಾರಣವಿದ್ದರೆ ಸಂಘದ ಉದ್ದೇಶ ಈಡೇರುವುದಿಲ್ಲ: ಮಧು ಬಂಗಾರಪ್ಪ

300x250 AD

ಸಿದ್ದಾಪುರ: ತಾಲೂಕು ವ್ಯವಸಾಯ ಹುಟ್ಟವಳಿಗಳ ಸಹಕಾರಿ ಮಾರಾಟ ಸಂಘ(ಟಿಎಂಎಸ್)ದ ಕಾನಸೂರು ಶಾಖಾ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಹಾಗೂ ಆರ್ಥಿಕ ಸಹಕಾರವನ್ನು ರೈತರು ಸಹಕಾರಿ ಸಂಘಗಳ ಮೂಲಕ ಸುಲಭವಾಗಿ ಪಡೆದುಕೊಳ್ಳಬಹುದು ಎಂದು ಹೇಳಿದರು. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ವ್ಯಕ್ತಿಗಳು ಇದ್ದರೂ ಅಲ್ಲಿ ರಾಜಕಾರಣ ಮಾಡಬಾರದು. ರಾಜಕಾರಣ ಮಾಡಿದರೆ ಸಹಕಾರಿ ಸಂಘಗಳ ಉದ್ದೇಶ ಈಡೇರುವುದಿಲ್ಲ. ರೈತರ ಸಂಕಷ್ಟಗಳಿಗೆ ಸಹಕಾರಿ ಸಂಘ ಸ್ಪಂದಿಸಿದಾಗ ಸರ್ಕಾರದ ಕಾರ್ಯಕ್ರಮ ಬಡವರ ಅಭಿವೃದ್ಧಿ ಕಾರ್ಯಕ್ರಮಗಳಾಗಿರುತ್ತವೆ. ಮೂರು ವರ್ಷಗಳಲ್ಲಿ 3 ಸಾವಿರ ಕೆಪಿಎಸ್ ಶಾಲೆಗಳನ್ನು ತೆರೆಯುತ್ತಿದ್ದು, ಪ್ರತಿ ಕ್ಷೇತ್ರದಲ್ಲಿ ಐದು ಕೆಪಿಎಎಸ್ ಶಾಲೆಗಳು ಪ್ರಾರಂಭಗೊಳ್ಳಲಿದೆ. ಸರ್ಕಾರಿ ಶಾಲೆ ತೊರೆದ ವಿದ್ಯಾರ್ಥಿಗಳನ್ನು ಪುನಃ ಸರ್ಕಾರಿ ಶಾಲೆಗಳಿಗೆ ಕರೆತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಇದೆ ವೇಳೆ ಸಹಕಾರಿಗಳಿಗೆ ಸನ್ಮಾನ ನೆರವೇರಿಸಿದರು.

ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ ರೈತರು ಜೀವಂತವಾಗಿದ್ದರೆ ಮಾತ್ರ ಸಹಕಾರಿ ಕ್ಷೇತ್ರ ಜೀವಂತ. ಸಹಕಾರಿ ಕ್ಷೇತ್ರದ ಕಾನೂನಿನ ತಿದ್ದುಪಡಿಗೆ ತಿದ್ದುಪಡಿ ಕಮೀಟಿ ಅಂತಿಮ ಹಂತಕ್ಕೆ ಬಂದಿದೆ. ಅನುಭವದ ಆಧಾರದ ಮೇಲೆ ತಿದ್ದುಪಡಿ ತರುವ ಅನಿವಾರ್ಯತೆ ಇದ್ದು, ಸಹಕಾರಿ ಕ್ಷೇತ್ರದ ಕಾನೂನನ್ನು ತಿದ್ದುಪಡಿ ಮಾಡದಿದ್ದರೆ ಸಹಕಾರಿ ಕ್ಷೇತ್ರ ಉಳಿಯುವುದಿಲ್ಲ. ತಿದ್ದುಪಡಿ ಮಾಡದಿದ್ದರೆ ರೈತರು ಮೀಟರ್ ಬಡ್ಡಿ ಸಾಲಕ್ಕೆ ಬಲಿಯಾಗುವಂತಾಗುತ್ತದೆ. ಸಹಕಾರಿ ಸಂಘಗಳು ಪತ್ತು ಮತ್ತು ಮಾರಾಟ ಜೋಡಣೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕೆಂದರು. ಶಾಸಕ ಭೀಮಣ್ಣ ನಾಯ್ಕ ಅಧ್ಯಕ್ಷತೆವಹಿಸಿದ್ದರು.

300x250 AD

ಇದೇ ಸಂದರ್ಭದಲ್ಲಿ ತಾಲೂಕಿನ ೨೩ ಹಾಗೂ ಸೊರಬ ತಾಲೂಕಿನ ಹರೀಶಿ ಮತ್ತು ಶಿರಸಿ ತಾಲೂಕಿನ ಅಜ್ಜಿಬಳ ಪ್ರಾಥಮಿಕ ಸಹಕಾರಿ ಸಂಘಗಳ ಅಧ್ಯಕ್ಷರನ್ನು ಹಾಗೂ ಸಹಕಾರಿ ರತ್ನ ಪುರಸ್ಕೃತ ವಿನೋದ ನಾಯಕ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಉಪಾಧ್ಯಕ್ಷ ಶಿವಕುಮಾರ ಎಸ್.ಪಾಟೀಲ,ರಾಜ್ಯ ಅಡಕೆ ಮಾರಾಟ ಸಹಕಾರ ಮಂಡಳದ ಅಧ್ಯಕ್ಷ ಎಚ್.ಎಸ್.ಮಂಜಪ್ಪ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ, ಟಿಎಸ್‌ಎಸ್ ಉಪಾಧ್ಯಕ್ಷ ಎಂ.ಎನ್.ಭಟ್ಟ, ರಾಮಕೃಷ್ಣ ಹೆಗಡೆ ಕಡವೆ, ತಬಲಿ ಬಂಗಾರಪ್ಪ, ಎಸ್.ಕೆ.ಭಾಗ್ವತ್, ಎಂ.ಜಿ.ನಾಯ್ಕ ಹಾದ್ರಿಮನೆ, ಜಿ.ಆರ್.ಹೆಗಡೆ ಹಳದೋಟ,ತಹಸೀಲ್ದಾರ ಎಂ.ಆರ್.ಕುಲಕರ್ಣಿ,ವ್ಯವಸ್ಥಾಪಕ ಸತೀಶ ಎಸ್.ಹೆಗಡೆ ಇತರರಿದ್ದರು. ಸಂಘದ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಸ್ವಾಗತಿಸಿದರು. ಜಿ.ಜಿ.ಹೆಗಡೆ ಬಾಳಗೋಡ, ಪ್ರಸನ್ನಕುಮಾರ ಭಟ್ಟ ಕಾರ್ಯಕ್ರಮ ನಿರ್ವಹಿಸಿದರು.

Share This
300x250 AD
300x250 AD
300x250 AD
Back to top