ಕಾರವಾರ: ಕಾರವಾರದ ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಿಭಾಗದ ನೂತನ ಕಚೇರಿಯನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಸತೀಶ ಕೆ ಸೈಲ್, ಸಾಮಾಜಿಕ ಅರಣ್ಯ ಮತ್ತು ಯೋಜನೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿ. ಗೀತಾಂಜಲಿ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಕೆನರಾ ವೃತ್ತ ಶಿರಸಿಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ., ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎನ್. ವಿಷ್ಣುವರ್ಧನ್, ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಶಾಂತ ಕೆ.ಸಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಜಿ ನಾವಿ, ಮತ್ತಿತರರು ಉಪಸ್ಥಿತರಿದ್ದರು.