Slide
Slide
Slide
previous arrow
next arrow

ಸೂಕ್ತ ಬಸ್ ಸೌಕರ್ಯ ಒದಗಿಸಿ: ಸತೀಶ್ ಸೈಲ್

300x250 AD

ಕಾರವಾರ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾವರ್ಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಮೀಣ ಭಾಗಕ್ಕೆ ಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯ ಒದಗಿಸುವಂತೆ ಸಾರಿಗೆ ಇಲಾಖೆಯ ಘಟಕ ವ್ಯವಸ್ಥಾಪಕರಿಗೆ ಶಾಸಕ ಸತೀಶ್ ಸೈಲ್ ನಿರ್ದೇಶನ ನೀಡಿದರು.

ಅವರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕಿನಲ್ಲಿ 26 ಕ್ಕೂ ಅಧಿಕ ಬಸ್ 15 ಲಕ್ಷಕ್ಕೂ ಅಧಿಕ ಕಿ.ಮೀ. ಸಂಚಾರ ಮಾಡಿದ ಬಸ್ ಗಳು ಸಂಚಾರ ಮಾಡುತ್ತಿದ್ದು, ತಕ್ಷಣವೇ ಅಂತಹ ಬಸ್ಗಳ ಸಂಚಾರಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಿದ ಅವರು, ಆರ್.ಟಿ.ಓ fitness ಇಲ್ಲದೇ ಬಸ್ ಸಂಚಾರ ಮಾಡಿದ್ದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಸದಾಶಿವಗಡದ ಮರಾಠ ಮಂಡಳಿ ಸಮುದಾಯ ಭವನಕ್ಕೆ ನಿವೇಶನ ಮಂಜೂರು ಮಾಡಿ, ರೂ. 50 ಲಕ್ಷ ಬಿಡುಗಡೆಯಾಗಿ ಕಾಮಗಾರಿ ಆರಂಭಿಸಿದ್ದು, ಯಾವುದೇ ರೀತಿಯ ಅಧೀಕೃತ ದಾಖಲೆಗಳು ಇಲ್ಲದೇ ಕಾಮಗಾರಿ ಪ್ರಾರಂಭಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಸಂಬಂಧಪಟ್ಟ ಸಂಘಕ್ಕೆ ನೋಟಿಸ್ ಜಾರಿ ಮಾಡಿ ಸಂಘ ನೋಂದಣಿಯಾಗಿರುವ ಬಗ್ಗೆ ದಾಖಲೆ ಪಡೆಯುವಂತೆ ಹಾಗೂ ಕೂಡಲೇ ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಇಲಾಖೆಯ ಮಾಹಿತಿ ಪಡೆದ ಶಾಸಕರು, ಬೋಟ್ ಗಳಲ್ಲಿ ಕಾರ್ಯನಿರ್ವಹಿಸುವರಿಗೆ ಗುರುತಿನ ಚೀಟಿ ನೀಡಿ, ಅವರ ವಿವರಗಳನ್ನು ಆರೋಗ್ಯ ಇಲಾಖೆಗೆ ನೀಡುವಂತೆ ಮೀನುಗಾರಿಕೆ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರತಿ ತಿಂಗಳಿಗೊಮ್ಮೆ ಅವರ ಆರೋಗ್ಯ ತಪಾಸಣೆ ಮಾಡುವಂತೆ ತಾಲ್ಲೂಕು ವೈದ್ಯಾಧಿಕಾರಿಗೆ ನಿರ್ದೇಶನ ನೀಡಿದರು.

300x250 AD

ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಾಲಪ್ಪನವರ ಆನಂದಕುಮಾರ, ತಾಲ್ಲೂಕು ಪಂಚಾಯತ್, ಆಡಳಿತಾಧಿಕಾರಿ ಸೋಮಶೇಖರ ಮೇಸ್ತಾ, ತಹಶೀಲ್ದಾರ ನಿಶ್ಚಲ್ ನರೋನಾ, ಪೌರಾಯುಕ್ತ ಚಂದ್ರಮೌಳಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share This
300x250 AD
300x250 AD
300x250 AD
Back to top