ಕಾರವಾರ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಯುವ ಜನರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಮ್/ಫಿಟ್ನೆಸ್, ಬ್ಯೂಟೀಷಿಯನ್, ವೀಡಿಯೋಗ್ರಫಿ, ನಿರೂಪಣಾ ಮತ್ತುವಾರ್ತಾ ವಾಚಕರ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶಿಬಿರದಲ್ಲಿ ಹಾಜರಾಗುವ ಯುವತಿಯರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಹೊರ ಜಿಲ್ಲೆಗಳಿಂದ ಭಾಗವಹಿಸುವ ಯುವತಿಯರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜ. 16 ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08382-201824 ಹಾಗೂ ಮೊಬೈಲ್ ಸಂಖ್ಯೆ:TEL:+919480886551 ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.