ಯಲ್ಲಾಪುರ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ ಮಂಗಳವಾರ ತಹಸೀಲ್ದಾರ ಎಂ. ಗುರುರಾಜ ಅಧ್ಯಕ್ಷತೆಯಲ್ಲಿ ನಡೆಯಿತು.
ಜ.26 ರಂದು ಗಣರಾಜ್ಯೋತ್ಸವ ಆಚರಣೆಯ ಕುರಿತು ಚರ್ಚಿಸಲಾಯಿತು. ಜ.21 ರಂದು ಅಂಬಿಗರ ಚೌಡಯ್ಯ ಹಾಗೂ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯ ಆಚರಣೆಯ ಸಿದ್ಧತೆ ಕುರಿತು ಚರ್ಚೆ ನಡೆಯಿತು.
ಗ್ರೇಡ್ 2 ತಹಸೀಲ್ದಾರ ಸಿ.ಜಿ.ನಾಯ್ಕ, ಬಿಇಒ ಎನ್.ಆರ್.ಹೆಗಡೆ, ಭಾರತ ಸೇವಾದಳದ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಪಿಎಸ್ಐ ರವಿ ಗುಡ್ಡಿ, ಬೋವಿವಡ್ಡರ್ ಸಮಾಜ ಸಂಘದ ಅಧ್ಯಕ್ಷ ದ್ಯಾಮಣ್ಣ ಬೋವಿವಡ್ಡರ್, ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಜಗನ್ನಾಥ ರೇವಣಕರ್, ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.