ಕಾರವಾರ: ರಾಜ್ಯದ ಲೋಕಾಯುಕ್ತರಾದ ಬಿ.ಎಸ್.ಪಾಟೀಲ್ ಜನವರಿ 12 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ 11 ರಿಂದ 1.30 ರ ವರೆಗೆ ಅಂಕೋಲಾದ ಸ್ವಾತಂತ್ರ್ಯ ಸಂಗ್ರಾಮ ಭವನದಲ್ಲಿ , ಉತ್ತರ ಕನ್ನಡ ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ನಂತರ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಅಂಕೋಲಾ ಸರ್ಕಾರಿ ಆಸ್ಪತ್ರೆ, ಹಿಂದುಳಿದ ವರ್ಗಗಳ ವಸತಿ ನಿಲಯಗಳು, ಮೊರಾರ್ಜಿ ದೇಸಾಯಿ ಹಾಸ್ಟೆಲ್ ಗಳು ಮತ್ತು ಸರ್ಕಾರಿ ಕಚೇರಿಗಳ ಪರಿಶೀಲನೆ ಹಾಗೂ ತ್ಯಾಜ್ಯ ವಿಲೇವಾರಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.