Slide
Slide
Slide
previous arrow
next arrow

ಉಪನ್ಯಾಸಕರ ಹುದ್ದೆಗಾಗಿ ಅರ್ಜಿ ಆಹ್ವಾನ

300x250 AD

ಕಾರವಾರ: ದಾಂಡೇಲಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವಿವಿಧ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಉಪನ್ಯಾಸಕರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು , ಬಿಇ ಇನ್ ಮೆಕ್ಯಾನಿಕಲ್ /ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ ಇಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಎಂಟೆಕ್ ಇನ್ ಮೆಕ್ಯಾನಿಕಲ್ /ಟೂಲ್ ಇಂಜಿನಿಯರಿಂಗ್ ಮತ್ತು ಇಲೆಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ನಲ್ಲಿ ಸ್ನಾತಕೋತ್ತರ ಪದವಿ ಹಾಗೂ ಎಂ.ಎಸ್.ಸಿ ಗಣಿತ ಹಾಗೂ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ನಮೂನೆ ಹಾಗೂ ಇತರೆ ವಿವರಗಳನ್ನು ಜಿಟಿಟಿಸಿ ಜಾಲತಾಣ : https://gttc.karnataka.gov.in ದಲ್ಲಿ ಪ್ರಕಟಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 16 ರ ಸಂಜೆ 5 ಗಂಟೆಯೊಳಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

300x250 AD

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಜಾಜಿನಗರ ಕೈಗಾರಿಕಾ ವಸಾಹತು, ಬೆಂಗಳೂರು ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂ : tel:+9108023507448ಇ-ಮೇಲ್ : mailto:gttcadmn2019@gmail.com ಗೆ ಸಂಪರ್ಕಿಸಿ ಪಡೆಯಬಹುದು ಎಂದು ದಾಂಡೇಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top