Slide
Slide
Slide
previous arrow
next arrow

ಉಳವಿಯಲ್ಲಿ ಶ್ರೀಅಯ್ಯಪ್ಪ ಸ್ವಾಮಿಯ ಪೂಜಾ ಕಾರ್ಯಕ್ರಮ

300x250 AD

ಜೋಯಿಡಾ : ಶ್ರೀ.ಅಯ್ಯಪ್ಪ ಸೇವಾ ಸಮಿತಿ ಮತ್ತು ಸ್ಥಳೀಯ ಭಕ್ತಾಭಿಮಾನಿಗಳ ಸಹಕಾರದಡಿ ತಾಲೂಕಿನ‌ ಉಳವಿಯಲ್ಲಿ ಶ್ರೀ.ಅಯ್ಯಪ್ಪ ಸ್ವಾಮಿಯ ಪೂಜಾ ಕಾರ್ಯಕ್ರಮವು ಮಂಗಳವಾರ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತು.

ಬೆಳಗಿನಿಂದಲೇ ಶ್ರೀ.ಅಯ್ಯಪ್ಪ ಸ್ವಾಮಿಯ ವಿವಿಧ ಪೂಜಾರಾಧನೆಗಳು ಹಾಗೂ ಪೂಜಾ ಕಾರ್ಯಕ್ರಮದ ಜೊತೆಯಲ್ಲಿ ಸಾಮೂಹಿಕವಾಗಿ ಶ್ರೀ.ಅಯ್ಯಪ್ಪನ ಭಜನಾ ಕಾರ್ಯಕ್ರಮವು ಜರುಗಿತು. ಮಹಾಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

300x250 AD

ಗುರುಸ್ವಾಮಿ ಈಶ್ವರ ಹಿರೇಮಠ್ ಅವರ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಶ್ರೀ.ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ಸ್ಥಳೀಯ ಭಕ್ತಾಭಿಮಾನಿಗಳು ಶ್ರಮಿಸಿದ್ದರು.

Share This
300x250 AD
300x250 AD
300x250 AD
Back to top