Slide
Slide
Slide
previous arrow
next arrow

ಅಗಲಿದ ಸಿಕಂದರ್.ಐ.ಜಮಾದಾರ್ ಅಂತಿಮ ದರ್ಶನ ಪಡೆದ ಆರ್.ವಿ.ದೇಶಪಾಂಡೆ

300x250 AD

ಹಳಿಯಾಳ : ಅರಣ್ಯ ಇಲಾಖೆಯ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಅನಾರೋಗ್ಯಕ್ಕೆ ತುತ್ತಾಗಿ ಹುತಾತ್ಮರಾದ ಉಪ‌ ವಲಯಾರಣ್ಯಾಧಿಕಾರಿ ಸಿಕಂದರ್.ಐ.ಜಮಾದಾರ್ ಪಾರ್ಥಿವ ಶರೀರ ಸ್ವಗ್ರಾಮವಾದ ತಾಲೂಕಿನ ಸಾಂಬ್ರಾಣಿ ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಶಾಸಕರಾದ ಆರ್.ವಿ.ದೇಶಪಾಂಡೆ ಅಂತಿಮ ದರ್ಶನ ಪಡೆದರು.

ಈ ವೇಳೆ ಅರಣ್ಯ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಅಗಲಿದ ಸಿಕಂದರ್.ಐ.ಜಮಾದಾರ್
ಕುಟುಂಬಕ್ಕೆ ಸಾಂತ್ವನ ತಿಳಿಸಿದ ಆರ್.ವಿ.ದೇಶಪಾಂಡೆ ಮೃತರ ಆತ್ಮಕ್ಕೆ ಚಿರಶಾಂತಿ ಪ್ರಾಪ್ತವಾಗಲಿ ಎಂದು ಪ್ರಾರ್ಥಿಸಿದರು.

300x250 AD

ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಸಿ.ಎಚ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಸಿಕಂದರ್.ಐ.ಜಮಾದಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Share This
300x250 AD
300x250 AD
300x250 AD
Back to top