Slide
Slide
Slide
previous arrow
next arrow

ಮಕರ ಸಂಕ್ರಾಂತಿ ರಜೆಯ ಪ್ರಯುಕ್ತ ಹೆಚ್ಚುವರಿ ಬಸ್ ಸೌಲಭ್ಯ

300x250 AD

ಕಾರವಾರ: ಮಕರ ಸಂಕ್ರಾಂತಿ ಹಬ್ಬದ ರಜೆಯ ಪ್ರಯುಕ್ತ ಶನಿವಾರ 13 ವಾರಾಂತ್ಯ ದಿನ, ಜನವರಿ 14 ಭಾನುವಾರ,ಜನವರಿ 15ರಂದು ಮಕರ ಸಂಕ್ರಾಂತಿ ಹಬ್ಬ ಇರುವುದರಿಂದ ಈ ರಜೆಗಳನ್ನು ಉಪಯೋಗಿಸಿಕೊಂಡು, ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಹಬ್ಬದ ಅವಧಿಯಲ್ಲಿ ಸುಮಾರು 90 ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಹಬ್ಬ ಮುಗಿದ ಮೇಲೆ ಜನವರಿ 15ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದು ಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

300x250 AD
Share This
300x250 AD
300x250 AD
300x250 AD
Back to top