Slide
Slide
Slide
previous arrow
next arrow

ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ

300x250 AD

ಅಂಕೋಲ: ತಾಲೂಕಿನ ಸುಂಕಸಾಳ ಗ್ರಾಮ ಪಂಚಾಯತ್ ಹೆಬ್ಬಾಳ ಗ್ರಾಮದಲ್ಲಿ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ಉತ್ತರಕನ್ನಡ, ತಾಲೂಕು ಪಂಚಾಯತ್ ಅಂಕೋಲ ಅವರ ಸಹಭಾಗಿತ್ವದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಂದಾಜು 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತವಾದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗ್ರಾಮಪಂಚಾಯತ್ ಉಪಾಧ್ಯಕ್ಷ ಸದಾನಂದ ನಾಯ್ಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸ್ವಚ್ಛತೆಯ ಸರಳಿಕರಣ ಸೂತ್ರವೇ ನಮ್ಮ ಈ ಘನತ್ಯಾಜ್ಯ ವಿಲೇವಾರಿ ಘಟಕ ಇದರ ನಿರ್ವಹಣೆಯ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಇದಕ್ಕೆ ತಮ್ಮೆಲ್ಲರ ಸಹಕಾರಬೇಕು. ಈ ನಿಟ್ಟಿನಲ್ಲಿ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸ್ವಚ್ಛ ಭಾರತ್ ಮಿಷನ್ನ ಜಿಲ್ಲಾ ಸಂಯೋಜಕ ಸೂರ್ಯನಾರಾಯಣ ಭಟ್ ಮಾತನಾಡಿ, ಕಸ ಎಲ್ಲೆಂದರಲ್ಲಿ ಬಿಸಾಡುವುದು, ಸುಡುವುದರಿಂದ ಆಗುವ ದುಷ್ಪರಿಣಾಮಗಳು ಹಾಗೂ ಸ್ವಚ್ಚತೆಯ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಹಾಗೂ ನಮ್ಮ ಜಿಲ್ಲೆಯಲ್ಲೇ ಕಸ ವಿಲೇವಾರಿ ಘಟಕಕ್ಕೆ ಸ್ಥಳಾವಕಾಶ ಒದಗಿಸಿ ಮಾದರಿಯಾದ ಪ್ರವೀಣ್ ನಾಯರ್ ಅವರನ್ನು ಪ್ರಶಂಸಿದರು. ಕಸ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರದ ಕುರಿತು ಗ್ರಾ.ಪಂ ಅಧ್ಯಕ್ಷ ರಮೀಜಾ ಸೈಯದ್ ಮಾತನಾಡಿದರು. ಈ ಸಂದರ್ಭದಲ್ಲಿ ಈ ಘಟಕಕ್ಕೆ ಸ್ಥಳಾವಕಾಶ ನೀಡಿ , ಘಟಕ ನಿರ್ಮಿಸಿದ ಪ್ರವೀಣ್ ನಾಯರ್ ದಂಪತಿಗಳನ್ನು ಅಭಿನಂದಿಸಿ ಗೌರವಿಸಲಾಯಿತು. ನೆರೆದಿದ್ದ ಗ್ರಾಮಸ್ಥರಿಗೆ ಕಸದ ಬುಟ್ಟಿಗಳನ್ನು ನೀಡಲಾಯಿತು.

300x250 AD

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ನಾಯ್ಕ, ಗ್ರಾ.ಪಂ ಸದಸ್ಯರಾದ ನಾಗರಾಜ್ ಹೆಗಡೆ, ಸುಜಾತಾ ಆಗೇರ್, ತಾಲೂಕು ಪಂಚಾಯತ್ ಐಇಸಿ ಸಂಯೋಜಕರು, ತಾಂತ್ರಿಕ ಸಹಾಯಕ ರಾಜೇಶ ಮಡಿವಾಳ, ಶಾಲಾ ಶಿಕ್ಷಕರು, ಪಂಚಾಯತ್ ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳು ಇದ್ದರು.

Share This
300x250 AD
300x250 AD
300x250 AD
Back to top