ಕಾರವಾರ: ರಾಷ್ಟ್ರ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ವತಿಯಿಂದ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಅಣುಕು ಕಾರ್ಯಾಚರಣೆಯನ್ನು ಜ.11ರಂದು ಹಮ್ಮಿಕೊಂಡಿದ್ದು, ಜಿಲ್ಲೆಯ ಕಾರವಾರ ಹಾಗೂ ಅಂಕೋಲಾ ತಾಲೂಕಿನಲ್ಲಿ ಪ್ರಕೃತಿ ವಿಕೋಪ ಸಂಭವಿಸುವ ಸ್ಥಳದಲ್ಲಿ ಬೆಳಿಗ್ಗೆ 9 ಗ0ಟೆಯಿಂದ ಮಧ್ಯಾಹ್ನ 2 ಗ0ಟೆಯವರೆಗೆ ಅಣಕು ಕಾರ್ಯಾಚರಣೆಯನ್ನು ಕೈಗೊಳ್ಳಲಾಗುವುದು.
ಈ ಸಂದರ್ಭದಲ್ಲಿ ಅಗತ್ಯ ಪ್ರಮಾಣದ ರಕ್ಷಣಾ ವಾಹನಗಳನ್ನು, ಆ್ಯಂಬುಲೆನ್ಸಗಳನ್ನು, ರಕ್ಷಣಾ ಸಾಮಗ್ರಿಗಳನ್ನು ಬಳಸಲಾಗುವುದು, ಕಾರಣ ಸುತ್ತಮುತ್ತಲಿನ ಪ್ರದೇಶದ ಜನರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದಿರುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.