ಕಾರವಾರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಹಾಗೂ ವಿಶ್ವಕರ್ಮ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇದಕ್ಕಾಗಿಯೇ ಪ್ರತ್ಯೇಕ ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ. ಸೆಂಟರ್ )ನ್ನುತೆರೆಯಲಾಗಿದ್ದು, ಜಿಲ್ಲೆಯ ಅರ್ಹ ಯುವಜನತೆ ಹಾಗೂ ಕುಶಲಕರ್ಮಿಗಳು ಈ ಕೇಂದ್ರದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಅಲ್ಲದೇ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಕಚೇರಿಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಯಲ್ಲಿಯೂ ಸಹ ಸಾಮಾನ್ಯ ಸೇವಾ ಕೇಂದ್ರವನ್ನು ತೆರೆದು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಯುವಜನತೆಗೆ ಮತ್ತು ಕುಶಲಕರ್ಮಿಗಳಿಗೆ ಯೋಜನೆಯ ಸೌಲಭ್ಯಗಳನ್ನು ತಲುಪಿಸುವಂತೆ ಸೂಚಿಸಿದ್ದಾರೆ.