ಕುಮಟಾ : ಇಲ್ಲಿನ ಮಹಾತ್ಮಾಗಾಂಧಿ ಕ್ರೀಡಾಂಗಣ ಮಣಿಕಿ ಮೈದಾನದಲ್ಲಿ ಕುಮಟಾ ಸಂಭ್ರಮ-2024 ಜ.16 ರಿಂದ 20ರವರೆಗೆ ನಡೆಯಲಿದೆ ಎಂದು ವಿಶ್ವರಕ್ಷಣಾ ಉತ್ತರ ಕನ್ನಡ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ವಿಶ್ವನಾಥ್ ನಾಯ್ಕ್ ಹೇಳಿದರು.
ಪಟ್ಟಣದಲ್ಲಿ ಖಾಸಗಿ ಹೋಟೆಲ್’ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ವಿಶ್ವ ರಕ್ಷಣಾ ಉತ್ತರ ಕನ್ನಡ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಮೂಲಕ ಗ್ರಾಮೀಣ ಭಾಗದ ಅಭಿವೃದ್ಧಿಯನ್ನು ಮಾಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಹಾಯ ಸಹಕಾರ ಆಗುವಂತಹ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕ, ಆರ್ಥಿಕ ಹಾಗೂ ಇನ್ನಿತರ ಸೇವಾಭಿವೃದ್ಧಿಗಳ ಮೂಲಕ ಗ್ರಾಮೀಣ ಸಮಾಜವನ್ನು ಅಭಿವೃದ್ಧಿ ಮಾಡುವುದು.
ಸಮಾಜದ ಎಲ್ಲಾ ವರ್ಗದ ಎಲ್ಲಾ ಕ್ಷೇತ್ರದ ಪ್ರತಿಭಾನ್ವಿತ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸಹಕಾರ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಮತ್ತು ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯದ ಬಗ್ಗೆ ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ಮತ್ತು ಶುಚಿತ್ವದ ಬಗ್ಗೆ ತಿಳಿಸುವುದು. ಗ್ರಾಮೀಣ ಭಾಗದಲ್ಲಿ ತಜ್ಞ ವೈದ್ಯರಿಂದ ಆರೋಗ್ಯದ ಶಿಬಿರಗಳನ್ನು ಏರ್ಪಡಿಸುವುದು.
ಗ್ರಾಮೀಣ ಭಾಗದ ನಶಿಸುತ್ತಿರುವ ಕ್ರೀಡೆಗಳನ್ನು ಉಳಿಸಿ, ಬೆಳೆಸಿಕೊಂಡು ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು. ಗ್ರಾಮೀಣ ಸಮಾಜದ ಅಭಿವೃದ್ಧಿಗಾಗಿ ಹಾಗೂ ಸಮಾಜದ ಹಿತಕ್ಕಾಗಿ ಶೈಕ್ಷಣಿಕ ಆರೋಗ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಶಾಲಾ ಕಾಲೇಜು, ಅನಾಥಾಶ್ರಮ, ವೃದ್ಧಾಶ್ರಮ, ಆಸ್ಪತ್ರೆಗಳಲ್ಲಿ ಅರಿವು ಮತ್ತು ನೆರವನ್ನು ನೀಡುವ ಬಗ್ಗೆ ಯೋಜನೆ ರೂಪಿಸಿ ನೀಡುವುದು. ಈ ದೃಷ್ಟಿಯಲ್ಲಿ ವಿಶ್ವ ರಕ್ಷಣಾ ಉತ್ತರ ಕನ್ನಡ ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಮೊಟ್ಟ ಮೊದಲ ಬಾರಿಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿ, ಕಲೆ, ಸಾಹಿತ್ಯ, ಕಲಾವಿದರುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕುಮಟಾ ಸಂಭ್ರಮ-2024 ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮೋಹನ್ ದಾಸ್ ಗೌಡ, ನರಸಿಂಹ ಭಟ್ಟ, ಗಣೇಶ್ ಜಿ ನಾಯ್ಕ್, ಉದಯ್ ಭಟ್,ಮಂದಾರ ಅಂತ್ರವಳ್ಳಿ ಪ್ರಸನ್ನ ಅಂತ್ರವಳ್ಳಿ ಮುರ್ತುಜ್ ಶೇಕ್, ಇದ್ದರು