Slide
Slide
Slide
previous arrow
next arrow

ಉತ್ತಮ ಕಾರ್ಯನಿರ್ವಹಣೆಗೆ ಕರ್ನಾಟಕ ಲೋಕಾಯುಕ್ತ ದೇಶದಲ್ಲೇ ಪ್ರಸಿದ್ದಿ: ಬಿ.ಎಸ್.ಪಾಟೀಲ್

300x250 AD

ಕಾರವಾರ: ಸಾರ್ವಜನಿಕರ ಸಮಸ್ಯೆಗಳಿಗೆ ಪರಿಣಾಮವಾಗಿ ಸ್ಪಂದಿಸುವಲ್ಲಿ ಮತ್ತು ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಕರ್ನಾಟಕ ಲೋಕಾಯುಕ್ತ ದೇಶದಲ್ಲೇ ಪ್ರಸಿದ್ದಿ ಪಡೆದಿದೆ ಎಂದು ಕರ್ನಾಟಕ ಲೋಕಾಯುಕ್ತದ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದರು.
ಅವರು ಶುಕ್ರವಾರ ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ನಡೆದ ಉತ್ತರ ಕನ್ನಡದ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಭ್ರಷ್ಟಾಚಾರ ನಿಯಂತ್ರಣದಲ್ಲಿ ಲೋಕಾಯುಕ್ತ ಸಂಸ್ಥೆಯ ಮೇಲೆ ಸಾರ್ವಜನಿಕರು ಹೆಚ್ಚು ನಂಬಿಕೆಯಿಟ್ಟಿದ್ದು , ಒಂದು ವರ್ಷದಲ್ಲಿ 8000 ಕ್ಕೂ ಅಧಿಕ ದೂರುಗಳು ಸಲ್ಲಿಕೆಯಾಗಿದ್ದು ಈ ದೂರುಗಳ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ, ಸರಕಾರಿ ನೌಕರರಿಗೆ ಲೋಕಾಯುಕ್ತ ಸಂಸ್ಥೆಯ ಕಾರ್ಯ ವಿಧಾನ , ವಿಚಾರಣೆ ಕ್ರಮಗಳು ಮತ್ತು ಆಡಳಿತ ವ್ಯವಸ್ಥೆಯಲ್ಲಿ ಪ್ರಾಮಾಣಿಕ ಕರ್ತವ್ಯ ನಿರ್ವಹಿಸುವ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದ್ದು , ಈಗಾಗಲೇ 8 ಕ್ಕೂ ಅಧಿಕ ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ ಎಂದರು.

ಲೋಕಾಯುಕ್ತದಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ದೂರುಗಳ ಬಗ್ಗೆ ಮಾತ್ರ ತನಿನೆ ನಡೆಸಿ ಕ್ರಮ ಕೈಗೊಳ್ಳದೇ ವಿವಿಧ ಇಲಾಖೆಗಳಲ್ಲಿನ ವೈಫಲ್ಯಗಳು ಮತ್ತು ಆಡಳಿತ ವ್ಯವಸ್ಥೆಯ ದೋಷಗಳ ಬಗ್ಗೆ ಸ್ವಯಂ ಪ್ರೇರಿತವಾಗಿ ಸಹ ದೂರುಗಳನ್ನು ದಾಖಲಿಸಿಕೊಂಡು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು. ಸಾರ್ವಜನಿಕ ನೌಕರರು ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗದೇ ಪ್ರಾಮಾಣಿಕವಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಪ್ರಾಮಾಣಿಕ ನೌಕರರನ್ನು ಸಮಾಜ ಗುರುತಿಸುವ ಮೂಲಕ ಅವರಿಗೆ ಉತ್ತಮ ಗೌರವ ದೊರೆಯಲಿದೆ ಎಂದರು.
ಸಾರ್ವಜನಿಕ ಕುಂದು ಕೊರತೆ ಕಾರ್ಯಕ್ರಮದಲ್ಲಿ ಅಂಕೋಲದ ಸ್ವಾತಂತ್ರ್ಯ ಸ್ಮಾರಕ ಭವನದಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ, ಅರಣ್ಯ ಇಲಾಖೆಯ ಜಮೀನು ಖಾಸಗಿಯವರಿಗೆ ಶಾಲಾ ನಿರ್ಮಾಣಕ್ಕೆ ನೀಡಿರುವ ಬಗ್ಗೆ, ಒಂದೇ ಸರ್ವೆ ನಂಬರ್ ನ್ನು ಇಬ್ಬರಿಗೆ ನೀಡಿರುವ ಬಗ್ಗೆ , ಜಾಗದ ಅಳತೆಯಲ್ಲಿ ತಪ್ಪಾಗಿ ನಮೂದಿರುವ ಬಗ್ಗೆ, ಮನೆಯ ಮೇಲಿರುವ ಅಪಾಯಕಾರಿ ಮರ ತೆರವುಗೊಳಿಸುವ ಬಗ್ಗೆ, ಭೂ ಪರಿವರ್ತನೆ ಕಡತ ಕಾಣೆಯಾಗಿರುವ ಬಗ್ಗೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಈ ಎಲ್ಲಾ ಅಹವಾಲುಗಳ ಬಗ್ಗೆ 10 ದಿನದಲ್ಲಿ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಲೋಕಾಯುಕ್ತರು ಸೂಚನೆ ನೀಡಿದರು.

300x250 AD

ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕುಮಾರ ಕಾಂದು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಲೋಕಾಯುಕ್ತ ಎಸ್. ಪಿ. ಕುಮಾರ ಚಂದ್ರ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ಉಪಸ್ಥಿತರಿದ್ದರು. ಜಿಲ್ಲೆಯ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು

Share This
300x250 AD
300x250 AD
300x250 AD
Back to top