ಕಾರವಾರ: ಕಾರು ಹಾಗೂ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬಳು ಗಾಯಗೊಂಡಿರುವ ಘಟನೆ ನಗರದ ಶಿವಾಜಿ ಸರ್ಕಲ್ ಬಳಿ ನಡೆದಿದೆ.
ಇಲ್ಲಿನ ಗ್ರಿನ್ ಸ್ಟ್ರೀಟ್ ರಸ್ತೆಯ ಮೂಲಕ ಸಂಚರಿಸುತ್ತಿರುವ ಸಂದರ್ಭದಲ್ಲಿ ಗೋವಾ ಕಡೆಯಿಂದ ಬರುತ್ತಿರುವ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟಿಯಲ್ಲಿದ್ದ ಮಹಿಳೆ ರಸ್ತೆ ಮೇಲೆಯೇ ಉರುಳಿ ಬಿದ್ದಿದ್ದಾಳೆ. ಈ ವೇಳೆ ಮಹಿಳೆ ಗಾಯಗೊಂಡಿದ್ದು ಸ್ಥಳಕ್ಕೆ ಬಂದ ಪೆÇಲೀಸರು ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.