Slide
Slide
Slide
previous arrow
next arrow

ಕಾರ್ಮಿಕರ ಅಪಘಾತ ಪರಿಹಾರ, ವೈದ್ಯಕೀಯ ಸೌಲಭ್ಯ ಯೋಜನೆಯ ನೋಂದಣಿ

300x250 AD

ಕಾರವಾರ: ಗಿಗ್ ಕಾರ್ಮಿಕರ ವಿಮಾ ಯೋಜನೆ ಹಾಗೂ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸ್ವಿಗ್ಗಿ, ಜೋಮೆಟೋ, ಅಮೆಜಾನ್. ಪ್ಲಿಫ್ಕಾರ್ಟ,ಡಾಮಿನೋಜ್, ಪಿಜ್ಜಾ ಇತ್ಯಾದಿ ಡಿಲೆವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಕಾರ್ಮಿಕರಿಗೆ ಜೀವ ವಿಮೆ 2 ಲಕ್ಷ, ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ಮೊತ್ತ 2 ಲಕ್ಷ ಒಟ್ಟು 4 ಲಕ್ಷ ರೂ. ಪರಿಹಾರ ದೊರೆಯುತ್ತದೆ. ಹಾಗೂ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ, ಅಪಘಾತ ಪ್ರಕರಣಗಳಲ್ಲಿ 1 ಲಕ್ಷ ಗಳವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ದೊರೆಯುತ್ತದೆ.
ದಿನಪತ್ರಿಕೆ ವಿತರಣಾ ಕಾರ್ಮಿಕರಿಗೆ ಅಪಘಾತದಿಂದ ಮರಣ ಹೊಂದಿದಲ್ಲಿ 2 ಲಕ್ಷ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ 2 ಲಕ್ಷ, ಹಾಗೂ ಅಪಘಾತ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ 1 ಲಕ್ಷಗಳವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ದೊರೆಯುತ್ತದೆ.
ಈ ಸೌಲಭ್ಯಗಳನ್ನು ಪಡೆಯಲು ಆಧಾರ ಕಾರ್ಡ, ಬ್ಯಾಂಕ ಪಾಸ್ ಪುಸ್ತಕದ ಪ್ರತಿ, ಆಧಾರ ಲಿಂಕ್ ಹೊಂದಿರುವ ಮೊಬೈಲ್ ಸಂಖ್ಯೆಯೊAದಿಗೆ ಆಯಾ ತಾಲ್ಲೂಕಿನ ಕಾರ್ಮಿಕ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ, ಮೂಲಕ ಇ-ಶ್ರಮದಲ್ಲಿ ನೋಂದಣಿ ಮಾಡಿಕೊಂಡು ಈ ಸೌಲಭ್ಯಗಳನ್ನು ಉಚಿತವಾಗಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ :tel:+9108382226637, tel:+9108382295854ಅಥವಾ ಮೊ.ಸಂ: tel:+919964178078ನ್ನು ಸಂಪರ್ಕಿಸುವAತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top