ಬೆಂಗಳೂರು: ಕೊರೋನಾ ಎರಡನೇ ಅಲೆಯ ತೀವ್ರತೆಯಿಂದ ರಾಜ್ಯದಲ್ಲಿ ಕಡಿಮೆ ಪ್ರಮಾಣದಲ್ಲಿ ಕಂಡು ಬರುತ್ತಿದ್ದು, ಸೋಮವಾರ ಕೊರೋನಾ ಸೋಂಕಿತರ ಸಂಖ್ಯೆ ಅತೀ ಕಡಿಮೆ ಪ್ರಮಾಣದಲ್ಲಿ ದಾಖಲಾಗಿದೆ. ನಿನ್ನೆ ಇಡೀ ರಾಜ್ಯಕ್ಕೆ ಸಂಬಂಧಿಸಿದಂತೆ 673 ಜನರಲ್ಲಿ ಕೊರೋನಾ ಸೋಂಕು ಕಂಡುಬಂದಿದೆ. 13 ಜನರು ಮೃತರಾಗಿದ್ದಾರೆ. 1,074 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 16,241 ಕ್ಕೆ ಸಕ್ರಿಯ ಪ್ರಕರಣ ಇಳಿಕೆಯಾಗಿದೆ ಎಂದು ಮೂಲಗಳು ಹೇಳಿವೆ.
ಎರಡನೇ ಅಲೆ ಕಳೆದ ಮಾರ್ಚ್ ಸಂದರ್ಭದಲ್ಲಿ ಆರಂಭವಾಗಿದ್ದು, ಆ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿಯೇ ಇತ್ತು. ಆದರೆ ಸುಮಾರು ಏಳು ತಿಂಗಳ ಬಳಿಕ ಇದೀಗ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಕಳೆದ ಒಂದು ತಿಂಗಳಿನಿಂದ ಸಾವಿರಕ್ಕಿಂತ ಹೆಚ್ಚು ದೈನಂದಿನ ಪ್ರಕರಣಗಳು ದಾಖಲಾಗುತ್ತಿತ್ತು. ನಿನ್ನೆ 673 ಜನರಲ್ಲಿ ಕೊರೋನಾ ಸೋಂಕು ಕಂಡು ಬಂದಿದ್ದು, ಆ ಮೂಲಕ ಕಡಿಮೆ ಪ್ರಮಾಣದಲ್ಲಿ ಕೊರೋನಾ ಪ್ರಕರಣ ದಾಖಲಾಗಿದೆ. ಆ ಮೂಲಕ ಸಾರ್ವಜನಿಕ ವಲಯದಲ್ಲಿ ಕೊಂಚ ನಿರಾಳತೆ ಮೂಡಿದಂತಾಗಿದೆ.
ನ್ಯೂಸ್ 13