Slide
Slide
Slide
previous arrow
next arrow

ಹಲವು ಕಾಮಗಾರಿಗಳಿಗೆ ಅನುದಾನ ಮಂಜೂರು: ಆರ್.ವಿ.ದೇಶಪಾಂಡೆ

300x250 AD

ದಾಂಡೇಲಿ : ತಾಲೂಕಿನ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಕಾರ್ಯನಿರ್ವಹಿಸಲಾಗುತ್ತಿದೆ. ಆರ್.ಟಿ.ಓ – ಟೆಸ್ಟ್ ಟ್ರ್ಯಾಕ್ ನಿರ್ಮಾಣಕ್ಕೆ ರೂ.5.55  ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ. ಹಳಿಯಾಳ ರಸ್ತೆಯ ದೇವರಾಜು ಅರಸು ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ 1.37 ಕೋಟಿ ಹಣವನ್ನು ಮಂಜೂರು ಮಾಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷ ಅನುದಾನದಲ್ಲಿ ಹೊಸ ಅಂಗನವಾಡಿ ನಿರ್ಮಾಣಕ್ಕೆ ಮಂಜೂರು ದೊರೆತಿದೆ. ಕ್ಷೇತ್ರದ ಗ್ರಾಮೀಣ ಹಾಗೂ ನಗರ ಪ್ರದೇಶದ ಅಂಗನವಾಡಿ ಕೇಂದ್ರಗಳ ನಿರ್ವಹಣೆಗೆ ತಲಾ ಒಂದು ಲಕ್ಷ ಹಣವನ್ನು ಮಂಜೂರು ಮಾಡಲಾಗಿದೆ. ಪಟೇಲ್ ವೃತ್ತದಿಂದ ಹಳೆ ದಾಂಡೇಲಿ ಮತ್ತು ಬೈಲುಪಾರಿನಿಂದ ಜನತಾ ಕಾಲೋನಿವರೆಗೆ ರಸ್ತೆ ಅಭಿವೃದ್ಧಿಗೆ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕರಾದ ಆರ್.ವಿ.ದೇಶಪಾಂಡೆ ಹೇಳಿದರು.

ಅವರು ಶನಿವಾರ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿ, ಸಿ ಎಸ್ ಆರ್ ಯೋಜನೆಯಡಿ ಜೆ.ಕೆ ಸಿಮೆಂಟ್ ಅವರು ವಾರ್ಡ್ ನಂ: 14ರಲ್ಲಿ ಸುಸಜ್ಜಿತ ಅಂಗನವಾಡಿ ಕೇಂದ್ರದ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದಾರೆ. ಐಟಿಸಿ ಕಂಪನಿಯವರು ಬಂಗೂರುನಗರ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಮಂಜೂರು ಮಾಡಿದ್ದಾರೆ. ವೋಲ್ವೋ ಕಂಪನಿಯವರು ದಾಂಡೇಲಿ ನಗರ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಬರುವ ನಿರ್ಮಲನಗರ, ಆಜಾದ್ ನಗರ, ಟೌನಶಿಪ್, ಕರಿಯಂಪಾಳಿ, ಮೈನಾಳ ಗ್ರಾಮದ ಒಟ್ಟು ಐದು ಅಂಗನವಾಡಿ ಕೇಂದ್ರಗಳನ್ನು ದತ್ತು ಪಡೆದುಕೊಂಡಿದ್ದಾರೆ. ಮಣಿಪಾಲ ಫೌಂಡೇಶನ್ ಸಂಸ್ಥೆಯವರು ಹಳೆ ದಾಂಡೇಲಿ ಪ್ರೌಢಶಾಲೆಗೆ ಆನ್ಲೈನ್ ಕ್ಲಾಸಸ್ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದ ದೇಶಪಾಂಡೆ ದಾಂಡೇಲಿ ನಗರ ಹಾಗೂ ತಾಲೂಕಿನ ಸರ್ವತೋಮುಖ ಪ್ರಗತಿಗಾಗಿ ಹಲವಾರು ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಸಾಕಷ್ಟು ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.

300x250 AD
Share This
300x250 AD
300x250 AD
300x250 AD
Back to top