Slide
Slide
Slide
previous arrow
next arrow

ಗಾಂಧಿನಗರ ಪ್ರಾಥಮಿಕ ಶಾಲೆಯ ನೂತನ‌ ಕೊಠಡಿ ಉದ್ಘಾಟನೆ

300x250 AD

ದಾಂಡೇಲಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದಲ್ಲಿ 2022-23ನೇ ಸಾಲಿನ ವಿವೇಕ ಯೋಜನೆಯಡಿ ಮಂಜೂರಾಗಿ ನಿರ್ಮಾಣಗೊಂಡ ಗಾಂಧಿ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಯನ್ನು ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಶನಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ.ದೇಶಪಾಂಡೆ, ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಮುತುವರ್ಜಿ ವಹಿಸಿ ಕೆಲಸ ನಿರ್ವಹಿಸಲಾಗುತ್ತಿದೆ. ಭವಿಷ್ಯದ ಉನ್ನತಿಯನ್ನು ಗುರಿಯಲ್ಲಿಟ್ಟುಕೊಂಡು ಸತತ ಅಧ್ಯಯನಶೀಲರಾಗುವ ಮೂಲಕ ಭವಿಷ್ಯದಲ್ಲಿ ಉನ್ನತಿಯನ್ನು ಸಾಧಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು

ಈ ಸಂದರ್ಭದಲ್ಲಿ ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಶಾಹಿದಾ ಪಠಾಣ್, ತಹಶೀಲ್ದಾರ್ ಶೈಲೇಶ್ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ ಹಾಲಮನ್ನವರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ, ನಗರ ಸಭೆಯ ನಿಕಟ ಪೂರ್ವ ಅಧ್ಯಕ್ಷೆ ಸರಸ್ವತಿ ರಜಪೂತ್, ನಿಕಟ ಪೂರ್ವ ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ್, ನಗರ ಸಭಾ ಸದಸ್ಯೆ ರುಕ್ಮಿಣಿ ಬಾಗಾಡೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಆರ್ ಹೆಗಡೆ, ಮುಖಂಡರಾದ ಮುನ್ನಾ ವಹಾಬ್, ಕರೀಂ ಅಜ್ರೇಕರ್, ಆರ್.ಪಿ.ನಾಯ್ಕ, ದಾದಾಪೀರ್ ನದೀಮುಲ್ಲಾ, ಮೊದಲಾದವರು ಉಪಸ್ಥಿತರಿದ್ದರು.

300x250 AD

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಮುಖಂಡರು, ಸ್ಥಳೀಯ ನಾಗರಿಕರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share This
300x250 AD
300x250 AD
300x250 AD
Back to top