ಕಾರವಾರ: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿಅನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿಇಲಾಖೆಯ ವೆಬ್ಸೈಟ್ https://dom.karnataka.gov.in ಅಥವಾ SSPಪೂರ್ಟಲ್ https://ssp.postmatric.karnataka.gov.in ಸಹಾಯವಾಣಿ: tel:+918277799990 ಮೂಲಕ ಸಂಪರ್ಕಿಸಬಹುದು ಅಥವಾ ಆಯಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.