ಕಾರವಾರ: ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಭತ್ತಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ ಭತ್ತವನ್ನು ಖರೀದಿಸಲು ಹಾಗೂ ಖರೀದಿಸಲಾದ ಭತ್ತವನ್ನು ಸಾರವರ್ಧಿತ ಅಕ್ಕಿಯನ್ನಾಗಿ ಪರಿವರ್ತಿಸಿ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಕುಮಟಾ, ಶಿರಸಿ, ಮುಂಡಗೋಡ, ಹಳಿಯಾಳ ಹಾಗೂ ಜೋಯಡಾ ತಾಲ್ಲೂಕು ಕೇಂದ್ರಗಳಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ನೋಂದಣಿ ದಿನಾಂಕವನ್ನು ಮಾರ್ಚ 31 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : tel:+9108382-226243 ಗೆ ಸಂಪರ್ಕಿಸಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.