ದಾಂಡೇಲಿ: ಗಣರಾಜ್ಯೋತ್ಸವ ಆಚರಣೆಯ ಕುರಿತಂತೆ ಪೂರ್ವಭಾವಿ ಸಭೆಯು ನಗರದ ಅಂಬೆವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿತು.
ಸಭೆಯಲ್ಲಿ ಎಂದಿನಂತೆ ಈ ವರ್ಷವೂ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಣಯಿಸಲಾಯಿತು. ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಭಾಗವಹಿಸಬೇಕೆಂದು ನಿರ್ಧರಿಸಲಾಯಿತು. ಗಣರಾಜ್ಯೋತ್ಸವ ದಿನದಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಹಿದಾ ಪಠಾಣ್, ಪೌರಾಯುಕ್ತರಾದ ಆರ್.ಎಸ್.ಪವಾರ್, ಸಿಪಿಐ ಭೀಮಣ್ಣ.ಎಂ.ಸೂರಿ, ನಗರಸಭೆಯ ನಿಕಟ ಪೂರ್ವ ಅಧ್ಯಕ್ಷೆ ಸರಸ್ವತಿ ರಜಪೂತ್, ನಿಕಟ ಪೂರ್ವ ಉಪಾಧ್ಯಕ್ಷ ಸಂಜಯ್ ನಂದ್ಯಾಳ್ಕರ್, ಪಿಎಸ್ಐ ಐ.ಆರ್.ಗಡ್ಡೇಕರ್, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ, ನಗರ ಸಭೆಯ ಸದಸ್ಯರು ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು, ಎ.ಆರ್.ಟಿ.ಓ, ಅರಣ್ಯ ಇಲಾಖೆ,ಹೆಸ್ಕಾಂ ಇಲಾಖೆಯ ಅಧಿಕಾರಿಗಳು, ನಗರಸಭೆ ಮತ್ತು ತಾಲೂಕು ಆಡಳಿತ, ನಗರ ಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.