ಕಾರವಾರ: ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಅರ್ಹರಾಗಿದ್ದು, ಇದುವರೆಗೆ ಪ್ರಯೋಜನ ಪಡೆಯದವರಿಗೆ ಅರಿವು ಮೂಡಿಸುವ, ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಯೋಜನೆಯ ಪ್ರಯೋಜನ ಪಡೆದ ಫಲಾನುಭವಿಗಳಿಂದ ಅನುಭವವನ್ನು ಹಂಚಿಕೊಳ್ಳುವ ಹಾಗೂ ವಿವಿಧ ಸೌಲಭ್ಯಗಳಿಗೆ ಫಲಾನುಭವಿಗಳನ್ನು ನೊಂದಣಿ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ವಿಕಸಿತ್ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಜನವರಿ 19 ರಂದು ಬೆಳಗ್ಗೆ 10 ಗಂಟೆಗೆ ಕಾರವಾರ ನಗರಸಭೆ ಆವರಣದಲ್ಲಿ ಮತ್ತು ಮಧ್ಯಾಹ್ನ 4 ಗಂಟೆಗೆ ಕೆವಿಜಿಎಸ್ ಬ್ಯಾಂಕ್ ಬಸ್ ಸ್ಟ್ಯಾಂಡ್ ಹತ್ತಿರ ಹಾಗೂ ಜನವರಿ 20 ರಂದು ಬೆಳಗ್ಗೆ 11 ಗಂಟೆಗೆ ಮಾಲಾದೇವಿ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ಪ್ರಕಟಣೆ ತಿಳಿಸಿದೆ. ಈ ಕಾರ್ಯಕ್ರಮದ ಅಂಗವಾಗಿ ಮೊಬೈಲ್ ವ್ಯಾನ್ನಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ವಿವರಗಳ ಬಗ್ಗೆ ಕಾರವಾರ ನಗರ ವ್ಯಾಪ್ತಿಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಲಿದೆ.