ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿಜ್ಞಾನ ಪ್ರತಿಭಾನ್ವೇಷಣೆ ಕಾರ್ಯಕ್ರಮದಡಿ ಪ್ರಶ್ನೋತ್ತರ ಹೊತ್ತಿಗೆಯನ್ನು ಪದವಿ ಪೂರ್ವ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವಂತೆ ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳಲ್ಲಿ ನುರಿತ ಸಂಪನ್ಮೂಲ ತಜ್ಞರ ಸಹಕಾರದೊಂದಿಗೆ ಹೊರತರಲಾಗಿದ್ದು, ಸದರಿ ಪುಸ್ತಕವನ್ನು ಅಕಾಡೆಮಿಯ ವೆಬ್ಸೈಟ್ https://kstacademy.in/kn/sts-k/ ದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಆಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.