Slide
Slide
Slide
previous arrow
next arrow

ವಾಣಿಜ್ಯ ತೆರಿಗೆ ಪರಿವೀಕ್ಷಕರ ಪರೀಕ್ಷೆ ; ನಿಷೇಧಾಜ್ಞೆ ಜಾರಿ

300x250 AD

ಕಾರವಾರ: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ಜನವರಿ 20 ಮತ್ತು 21 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಕಾರವಾರ, ಶಿವಾಜಿ ಪದವಿ ಪೂರ್ವ ಕಾಲೇಜು ಚಿತ್ತಾಕುಲ, ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಕಾರವಾರ, ಹಿಂದೂ ಹೈಸ್ಕೂಲ್, ರಹಿಂ ಖಾನ ಯುನಿಟಿ ಹೈಸ್ಕೂಲ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಸೇಂಟ್ ಜೊಸೆಫ್ ಹೈಸ್ಕೂಲ್, ಬಿಜಿವಿಎಸ್ ಆಟ್ರ್ಸ ಮತ್ತು ಕಾಮರ್ಸ ಕಾಲೇಜ ಸದಾಶಿವಗಡ, ಸರ್ಕಾರಿ ಹೈಸ್ಕೂಲ್ ಕಾರವಾರ ದಲ್ಲಿ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.

ಸದರಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತತಾಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ಸಿ.ಆರ್.ಪಿ.ಸಿ ಕಾಯ್ದೆ ಕಲಂ 144 ರಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿಷೇಧಾಜ್ಞೆಯನ್ನು ಹೊರಡಿಸಿರುತ್ತಾರೆ. ಸದರಿ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಆದೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ವಸ್ತುಗಳು ಅಂದರೆ, ಮೊಬೈಲ್ ಫೋನಗಳು, ಸ್ಮಾರ್ಟ ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್ಗಳನ್ನು ತರಲು ನಿಷೇಧಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top