Slide
Slide
Slide
previous arrow
next arrow

ಜ.18ಕ್ಕೆ ಶುದ್ಧ ಕುಡಿಯುವ ನೀರಿನ ಉದ್ಘಾಟನೆ

300x250 AD

ದಾಂಡೇಲಿ : ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಅನಂತಮೂರ್ತಿ ಹೆಗಡೆ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯು ಜ.18 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ನೂರಕ್ಕೂ ಹೆಚ್ಚು ಶಾಲಾ-ಕಾಲೇಜು ಮತ್ತು ಬಸ್‌ ನಿಲ್ದಾಣ, ಆಸ್ಪತ್ರೆಗಳಿಗೆ ಉಚಿತವಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಈಗಾಗಲೆ ಅಳವಡಿಕೆ ಮಾಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಇದೀಗ ದಾಂಡೇಲಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿದ್ದು, ಇದರ ಉದ್ಘಾಟನೆಯನ್ನು ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಸಮಾಜಸೇವಕರಾದ ಅನಂತಮೂರ್ತಿ ಹೆಗಡೆಯವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಪ್ರಕಟಣೆಯಲ್ಲಿ ವಿನಂತಿಸಿದೆ.

300x250 AD
Share This
300x250 AD
300x250 AD
300x250 AD
Back to top